ಕಾಪು : ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಸಾನಿಧ್ಯದಲ್ಲಿ ಫೆ. 28 ರಿಂದ ಮಾ.2 ರವರೆಗೆ ಜರಗಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – ಮಾತೃ ವೈಭವಕ್ಕೆ ಪೂರ್ವಭಾವಿಯಾಗಿ ಫೆ. 26 ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆ ವೈಭವ ನಡೆಯಲಿದೆ.
ಮೂರು ದಿನಗಳ ಕಾಲ ನಡೆಯುವ ಮಾತೃವೈಭವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಯುಕ್ತ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಪ್ರತೀ ದಿನ ಮಧ್ಯಾಹ್ನ ಮತ್ತು ರಾತ್ರಿ ನಿರಂತರ ಅನ್ನಸಂತರ್ಪಣೆ ನಡೆಯಲಿದೆ. ಅದಕ್ಕೆ ಪೂರಕವಾಗಿ ಭಕ್ತಾಧಿಗಳು, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿಂದ ಹೊರೆಕಾಣಿಕೆ ಸಂಗ್ರಹಿಸಲು ತೀರ್ಮಾನಿಸಿದೆ.
ಇದನ್ನೂ ಓದಿ : 👇
ಸಮಿತಿಯು ಕಾಪು ಮಾರಿಯಮ್ಮನ ಭಕ್ತಾಧಿಗಳು, ಕಾಪುವಿನ ಅಮ್ಮನ ಮಕ್ಕಳು, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿಂದ ಸಂಗ್ರಹಿಸುವ ಹೊರೆಕಾಣಿಕೆಯನ್ನು ಫೆ. 26ರಂದು ಸಂಜೆ ಗಂಟೆ 4 ಗಂಟೆಗೆ ಕಾಪು ಉಳಿಯಾರಗೋಳಿ ದಂಡತೀರ್ಥ ಮಠದ ಬಳಿಯಿಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆಯ ಮೂಲಕವಾಗಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಮರ್ಪಿಸಲಾಗುವುದು ಎಂದು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ಮಾತೃವೈಭವ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಹೊರೆಕಾಣಿಕೆ ಸಮರ್ಪಣಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : 👇
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…