Featured

ಫೆ.7 ಮತ್ತು 8ರಂದು ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳ – vishwanews24

ಫೆ.7 ಮತ್ತು 8ರಂದು ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳ

ಮಂಗಳೂರು: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳವು ಫೆ.7 ಮತ್ತು 8ರಂದು ನಡೆಯಲಿದ್ದು, ಇದರ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದೆ. ಐಕಳ ಕಂಬಳದಲ್ಲಿ ಜೂಜು ನಿಯಂತ್ರಣ ಹಾಗೂ ಸಮಯಪಾಲನೆಗೆ ಆದ್ಯತೆ ನೀಡಲಾಗುವುದು ಎಂದು ಕಂಬಳ ಅಸೋಸಿಯೇಶನ್ ಮತ್ತು ಐಕಳ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದರು.

ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಬಳದಲ್ಲಿ ಜೂಜು ಸಕ್ರಿಯವಾಗಿರುವ ಬಗ್ಗೆ ಈಗಾಗಲೇ ದೂರುಗಳು ಬಂದಿದೆ. ಐಕಳ ಕಂಬಳದಲ್ಲಿ ಅದನ್ನು ಸಂಪೂರ್ಣ ನಿಯಂತ್ರಣ ತರಲಾಗುವುದು. ಅಲ್ಲದೆ ಕಂಬಳದಲ್ಲಿ ಕೋಣ ಬಿಡುವ ವಿಚಾರಕ್ಕೆ ಸಮಯ ನಿಗದಿಮಾಡಲಾಗಿದೆ. ನಿಗದಿತ ಅವಧಿಗೆ ಕೋಣ ಗಂತಿಗೆ ಬಾರದಿದ್ದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು. ಈ ಮೂಲಕ ಕಂಬಳದಲ್ಲಿ ಸಮಯಪಾಲನೆಗೆ ಆದ್ಯತೆ ನೀಡಲಾಗುವುದು ಎಂದರು.

ಫೆ.3ರಿಂದ 8ರವರೆಗೆ ನಿರಂತರ ಕಂಬಳೋತ್ಸವ, ಧಾರ್ಮಿಕ ಕಾರ್ಯಕ್ರಮ, ಅನ್ನಸಂತರ್ಪಣೆ ನಡೆಯಲಿದೆ. 6ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಮೇಳದ ಯಕ್ಷಗಾನ ನಡೆಯಲಿದೆ. ಫೆ.7ರಂದು ಬೆಳಗ್ಗೆ 8ಕ್ಕೆ ಕರೆಮುಹೂರ್ತ ನಡೆಯಲಿದ್ದು, ಕೋಣಗಳು ಕರೆಗೆ ಇಳಿಯಲಿದೆ. ಬೆಳಗ್ಗೆ 9:30ಕ್ಕೆ ವಾಸ್ತುತಜ್ಞ ಚಂದ್ರಶೇಖರ ಸ್ವಾಮೀಜಿ ಕಂಬಳಕ್ಕೆ ಚಾಲನೆ ನೀಡಲಿದ್ದಾರೆ. ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ರಿಗೆ ಕಂಬಳ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಕಂಬಳದಲ್ಲಿ ಎಲ್ಲ ಕೋಣಗಳ ಯಜಮಾನರನ್ನು ವಿಶೇಷವಾಗಿ ಗೌರವಿಸಲಾಗುವುದು. ವಿಜೇತ ಕೋಣಗಳಿಗೆ ಚಿನ್ನದೊಂದಿಗೆ ನಗದು ಬಹುಮಾನ ನೀಡಲಾಗುವುದು. ಸೆಮಿಫೈನಲ್‌ಗೆ ಬಂದಿರುವ ಎಲ್ಲ ಕೋಣಗಳಿಗೆ ವಿಶೇಷ ಬಹುಮಾನವಿದೆ. ಕನಹಲಗೆ ವಿಭಾಗದಲ್ಲಿ ಭಾಗವಹಿಸುವ ವಿಜೇತ ಕೋಣಗಳಿಗೆ ಚಿನ್ನದೊಂದಿಗೆ ಎಲ್ಲಾ ಕೋಣದ ಯಜಮಾನರಿಗೂ ವಿಶೇಷ ಬಹುಮಾನ, ನಗದು ಪುರಸ್ಕಾರವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಐಕಳ ಬಾವ ಕಂಬಳದ ಕಾರ್ಯಾಧ್ಯಕ್ಷ ಚಿತ್ತರಂಜನ್ ಭಂಡಾರಿ, ಮುಂಬೈ ಸಮಿತಿ ಅಧ್ಯಕ್ಷ ಕುಶಾಲ್ ಭಂಡಾರಿ, ಐಕಳ ಬಾವ ಕಂಬಳದ ಪ್ರಧಾನ ಕಾರ್ಯದರ್ಶಿ ಸ್ವರಾಜ್ ಶೆಟ್ಟಿ ದೊಡ್ಡಮನೆ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ, ತಿಲಕ್‌ರಾಜ್ ಬಲ್ಲಾಳ್, ಪ್ರದೀಪ್ ಕುಮಾರ್ ಐಕಳಬಾವ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago