ಮಂಗಳೂರು: ಐಕಳಬಾವ ಕಾಂತಾಬಾರೆ ಬೂದಾಬಾರೆ ಕಂಬಳ ಈ ಬಾರಿ ಸುವರ್ಣ ಮಹೋತ್ಸವ ಆಚರಿಸುತ್ತಿದ್ದು ಫೆ. 7, 8ರಂದು ಕಂಬಳ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಇದೇ ಸಂದರ್ಭ ನಾಗಾಲಯ, ಬ್ರಹ್ಮಸ್ಥಾನ ಸಹಿತ ಪರಿವಾರ ಶಕ್ತಿಗಳ ಶಿಲಾಮಯ ಗುಡಿಯ ಸ್ಥಾಪನೆಯೊಂದಿಗೆ ಬ್ರಹ್ಮಕಲಶೋತ್ಸವ, ದೈವಗಳ ಪುನರ್‌ಪ್ರತಿಷ್ಠಾಪನೆ ನಡೆಯಲಿದೆ.
ಫೆ. 7ರಂದು ಬೆಳಗ್ಗೆ 8ಕ್ಕೆ ಕರೆ ಮೂಹೂರ್ತ ನಡೆಯಲಿದ್ದು 9.30ಕ್ಕೆ ಚಂದ್ರಶೇಖರ ಸ್ವಾಮೀಜಿಯವರು ಚಾಲನೆ ನೀಡಲಿದ್ದಾರೆ. ಒರಿಸ್ಸಾ ಹೈಕೋರ್ಟ್ ನ್ಯಾಯಾಧೀಶ ಕೃಷ್ಣ ದೀಕ್ಷಿತ್, ಮೂಲ್ಕಿ ಅರಸರಾದ ದುಗ್ಗಣ್ಣ ಸಾವಂತರು, ಕಟೀಲು ದೇಗುಲದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ವಂಣ ಒಸ್ವಾಲ್ಡ್ ಮೊಂತೇರೋ, ಕಾಪು ಮಾರಿಯಮ್ಮ ದೇವಸ್ಥಾನದ ಧರ್ಮದರ್ಶಿ ಕೆ. ವಾಸುದೇವ ಶೆಟ್ಟಿ, ಐಕಳ ಪಂಚಾಯತ್ ಅಧ್ಯಕ್ಷ ದಿವಾಕರ ಚೌಟ, ಐಕಳ ಫ್ಯಾಮಿಲಿ ವೆಲ್‌ಫೇರ್‌ಟ್ರಸ್ಟ್ ನ ಅಧ್ಯಕ್ಷ ಕೆ.ಪಿ.ಕೆ. ಹೆಗ್ಡೆ ಭಾಗವಹಿಸಲಿದ್ದಾರೆ. ಸಂಜೆಯ ಸಭಾ ಕಾರ್ಯಕ್ರಮವನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಸ್ಪೀಕರ್ ಯು.ಟಿ ಖಾದರ್,ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕೇಂದ್ರ ಸಚಿವರಾದ ಎಚ್.ಡಿ. ಕುಮಾರ ಸ್ವಾಮಿ, ಸಚಿವರಾದ ದಿನೇಶ್ ಗುಂಡೂ ರಾವ್, ಜಮೀರ್‌ಅಹಮದ್ ಖಾನ್, ಸಂತೋಷ್ ಲಾಡ್, ಎಂ.ಆ.ಜಿ. ಗ್ರೂಪ್ ಚೇರ್ಮನ್ ಪ್ರಕಾಶ್ ಶೆಟ್ಟಿ, ಸಂಸದ ಕ್ಯಾಣ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಶೆಟ್ಟಿ ಐಕಳ, ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಕಿಶೋರ್‌ಅಲ್ಪ ಭಾಗವಹಿಸಲಿದ್ದಾರೆ.
ಇದನ್ನೂ ಓದಿ👇
ಮುಂಬಯಿ ಸಮಿತಿಯ ಅಧ್ಯಕ್ಷ ಕುಶಲ ಭಂಡಾರಿ ಮಾತನಾಡಿದರು. ಈ ಸಂದರ್ಭ ಸಮಿತಿಯ ಕಾರ್ಯಾಧ್ಯಕ್ಷ ಚಿತ್ತರಂಜನ್ ಭಂಡಾರಿ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ಒಡುಹಿತ್ತು, ಪ್ರಧಾನಕಾರ್ಯದರ್ಶಿ ಸ್ವರಾಜ್ ಶೆಟ್ಟಿ ಮುಂಡೂರು ದೊಡ್ಡಮನೆ, ಮುರಳೀಧರ ಶೆಟ್ಟಿ ಐಕಳಬಾವ, ಲೋಕೇಶ್ ಮುಚ್ಚಾರು, ಅಮರನಾಥ್, ಸುಕುಮಾರ್‌ಭಂಡಾರಿ, ಸುರೇಶ್ ಕೊಂಡೆ, ಪ್ರಮೋದ್ ಕುಮಾರ್‌ಐಕಳಬಾವ, ಪ್ರದೀಪ್ ಕುಮಾರ್, ಲವ ಶೆಟ್ಟಿ ಕಿನ್ನಿಗೋಳಿ, ಉದಯ ಶೆಟ್ಟಿ, ರವಿರಾಜ್ ಶೆಟ್ಟಿ, ಲೀಲಾಧರ ಶೆಟ್ಟಿ, ಸುಧಾಮ ಶೆಟ್ಟಿ, ದಯೇಶ್ ಐಕಳ, ಶ್ರೀಶ ಸರಫ್ ಐಕಳ, ಶರತ್ ಶೆಟ್ಟಿ ಸ್ಥಳಂತಗುತ್ತು ಮತ್ತಿತರರು ಉಪಸ್ಥಿತರಿದ್ದರು.
‘ಕಂಬಳ ರತ್ನ’ ಪ್ರಶಸ್ತಿ
ಕಂಬಳ್ಳೋತ್ಸವದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾಣ ಎಂ.ಎನ್. ರಾಜೇಂದ್ರ ಕುಮಾರ್‌ಅವರಿಗೆ “ಕಂಬಳ ರತ್ನ’ ಪ್ರಶಸ್ತಿ ನೀಡಲಾಗುವುದು.
ಇದನ್ನೂ ಓದಿ 👇
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…