Featured

ಫೇಲ್​ ಆದ SSLC ವಿದ್ಯಾರ್ಥಿಗಳ ಗಮನಕ್ಕೆ : ಮರು ಪರೀಕ್ಷೆ ದಿನಾಂಕ ಪ್ರಕಟ , ವೇಳಾಪಟ್ಟಿ ಹೀಗಿದೆ – Vishwanews24

ಫೇಲ್​ ಆದ SSLC ವಿದ್ಯಾರ್ಥಿಗಳ ಗಮನಕ್ಕೆ : ಮರು ಪರೀಕ್ಷೆ ದಿನಾಂಕ ಪ್ರಕಟ , ವೇಳಾಪಟ್ಟಿ ಹೀಗಿದೆ

ಬೆಂಗಳೂರು: 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ  ದಿನಾಂಕ ನಿಗಧಿಯಾಗಿದ್ದು, ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜೂನ್‌ 7ರಿಂದ 14ರವರೆಗೆ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷಾ ಸಮಯವಾಗಿದೆ. ಇನ್ನೂ ಪ್ರತಿ ವಿಷಯಕ್ಕೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಹೀಗಿದೆ
7-6-2024- ಪ್ರಥಮ ಭಾಷೆ
8-6-2024- ತೃತೀಯ ಭಾಷೆ
10-6-2024- ಗಣಿತ, ಸಮಾಜ ಶಾಸ್ತ್ರ
11-6-2024- ಅರ್ಥ ಶಾಸ್ತ್ರ, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌
12-6-2024- ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
13-6-2024- ದ್ವಿತೀಯ ಭಾಷೆ (ಇಂಗ್ಲೀಷ್‌ ಹಾಗೂ ಕನ್ನಡ)
14-6-2024 – ಸಮಾಜ ವಿಜ್ಞಾನ

ಸೂಚನೆಗಳು ಹೀಗಿವೆ..
ಜೂನ್‌ 15ರಂದು ಜೆಟಿಎಸ್‌ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು. ಸಬ್ಜೆಕ್ಟ್‌ ಕೋಡ್‌ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ. ಹಿಂದೂಸ್ತಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ. ಸದರಿ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಮಧ್ಯಾಹ್ನ 3.45 ಗಂಟೆಯವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 5.15 ಗಂಟೆಯವರೆಗೆ ನಡೆಸಲಾಗುವುದು.

ವಿವಿಧ ಪ್ರಕಾರದ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಬರಹಗಾರರ ಸೌಲಭ್ಯ ಅಥವಾ ಹೆಚ್ಚುವರಿ ಸಮುಯದ ಅಥವಾ ಎರಡನ್ನೂ ಪಡೆಯುವ ಅವಕಾಶವಿದೆ. ಈ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ ಹೆಚ್ಚುವರಿಯಾಗಿ 30 ನಿಮಿಷಗಳನ್ನು ನೀಡಲಾಗುವುದು.

ಪ್ರಥಮ ಭಾಷಾ ವಿಷಯಗಳು ಮತ್ತು ಐಚ್ಛಿಕ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1:15ರವರೆಗೆ ಅವಧಿ ನಿಗದಿಪಡಿಸಿದೆ. ಪ್ರಥಮ ಭಾಷಾ ವಿಷಯಗಳು ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ. ಎನ್.ಎಸ್.ಕ್ಯೂ.ಎಫ್ ವಿಷಯಗಳ ಪರೀಕ್ಷೆ ಬೆಳಗ್ಗೆ 10.15 ರಿಂದ 12.30ರವರೆಗೆ ನಡೆಯಲಿದೆ. ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago