Featured

ಫೇಸ್‌ಬುಕ್‌ ಗೆಳತಿ ಬಲೆಗೆ ಬಿದ್ದ ಕಂಬಾಳು ಮಠದ ಸ್ವಾಮೀಜಿ : ಸುಮಾರು ₹37 ಲಕ್ಷ ವಂಚನೆ – Vishwanews24

ಫೇಸ್‌ಬುಕ್‌ ಗೆಳತಿ ಬಲೆಗೆ ಬಿದ್ದ ಕಂಬಾಳು ಮಠದ ಸ್ವಾಮೀಜಿ – ಸುಮಾರು ₹37 ಲಕ್ಷ ವಂಚನೆ

ಬೆಂಗಳೂರು: ‘ಫೇಸ್‌ಬುಕ್’ನಲ್ಲಿ ಪರಿಚಯವಾಗಿ ವಿಡಿಯೊ ಕರೆ ಮೂಲಕ ಸಲುಗೆಯಿಂದ ಮಾತನಾಡುತ್ತಿದ್ದ ಯುವತಿಯೊಬ್ಬರ ಬಲೆಗೆ ಬಿದ್ದು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಸುಮಾರು ₹37 ಲಕ್ಷ ಕಳೆದುಕೊಂಡಿರುವ ಬಗ್ಗೆ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರು ಹಣ ವರ್ಗಾವಣೆ ದಾಖಲೆ ಸಮೇತ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಯುವತಿ ವರ್ಷಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಸ್ವಾಮೀಜಿ ಅವರನ್ನು 2020ರಲ್ಲಿ ಪರಿಚಯ ಮಾಡಿಕೊಂಡಿದ್ದ ಯುವತಿ, ನಾನಾ ಕಾರಣ ನೀಡಿ ಹಣ ಪಡೆದಿದ್ದಾಳೆ. ಹಣ ವರ್ಗಾವಣೆಗೆ ಸಂಬಂಧಪಟ್ಟ ಎಲ್ಲ ದಾಖಲೆಗಳು ಸ್ವಾಮೀಜಿ ಬಳಿ ಇವೆ. ಯಾವ ಖಾತೆಗೆ ಹಣ ಜಮೆ ಆಗಿದೆ. ಬೇರೆ ಯಾರೆಲ್ಲ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ’ ಎಂದು ಹೇಳಿದರು.

ದೂರಿನ ವಿವರ: ‘ಫೇಸ್‌ಬುಕ್‌’ನಲ್ಲಿ ವರ್ಷಾ ಹೆಸರಿನ ಖಾತೆಯಿಂದ 2020ರಲ್ಲಿ ಫ್ರೆಂಡ್‌ ರಿಕ್ವೆಸ್ಟ್ ಬಂದಿತ್ತು. ಅದನ್ನು ಸ್ವೀಕರಿಸಿದ್ದೆ. ನಂತರ, ಯುವತಿ ಚಾಟಿಂಗ್ ಮಾಡಲಾರಂಭಿಸಿದ್ದಳು. ‘ಆಧ್ಯಾತ್ಮಿಕವಾಗಿ ಆಸಕ್ತಿ ಇದೆ’ ಎಂದು ಹೇಳಿ, ಮೊಬೈಲ್ ನಂಬರ್ ಪಡೆದುಕೊಂಡಿದ್ದಳು. ತನ್ನ ಮೊಬೈಲ್‌ ನಂಬರ್ ಸಹ ಕೊಟ್ಟಿದ್ದಳು’ ಎಂದು ಸ್ವಾಮೀಜಿ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸ್ ಮೂಲಗಳು ಹೇಳಿವೆ.

‘ಮೊಬೈಲ್ ನಂಬರ್ ಪಡೆದ ಬಳಿಕ ವಾಟ್ಸ್‌ಆ್ಯಪ್‌ನಲ್ಲಿ ಸಂದೇಶ ಕಳುಹಿಸಲಾರಂಭಿಸಿದ್ದಳು. ತಾನೊಬ್ಬ ಅನಾಥೆ ಎನ್ನುತ್ತಿದ್ದ ವರ್ಷಾ, ವಿಡಿಯೊ ಕರೆ ಸಹ ಮಾಡಲಾರಂಭಿಸಿದ್ದಳು. ಹಲವು ಬಾರಿ ವಿಡಿಯೊ ಕರೆ ಮಾಡಿದ್ದ ಯುವತಿ, ಎಂದಿಗೂ ಮುಖ ತೋರಿಸಿರಲಿಲ್ಲ. ಕೈ–ಕಾಲುಗಳನ್ನು ಮಾತ್ರ ತೋರಿಸಿ ಮಾತನಾಡುತ್ತಿದ್ದಳು’ ಎಂದೂ ಸ್ವಾಮೀಜಿ ದೂರನಲ್ಲಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಸ್ವಾಮೀಜಿ ವಂಚನೆ ಪ್ರಕರಣದಲ್ಲಿ ಆರೋಪಿ ಕಡೆಯವನು ಎನ್ನಲಾದ ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಲ್ಲಿಕಾರ್ಜುನ ಬಾಲದಂಡಿ, ಬೆಂಗಳೂರು ಗ್ರಾಮಾಂತರ ಎಸ್ಪಿ ಹೇಳಿದ್ದಾರೆ

ಘಟನೆಯ ವಿವರ:

‘ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್ ಮಾಡುತ್ತಿರುವುದಾಗಿ ಹೇಳಿದ್ದ ಯುವತಿ, ನನ್ನಿಂದ ₹ 2 ಲಕ್ಷ ಪಡೆದಿದ್ದಳು. ತನ್ನ ಹೆಸರಿನಲ್ಲಿ ಹೆಚ್ಚು ಜಮೀನಿದ್ದು, ಅದನ್ನು ಮಠದ ಹೆಸರಿಗೆ ಬರೆಯುವುದಾಗಿ ಹೇಳಿದ್ದ ಯುವತಿ ಹಂತ ಹಂತವಾಗಿ ₹ 35 ಲಕ್ಷ ಪಡೆದಿದ್ದಳು.’

‘ಜಮೀನು ದಾಖಲೆ ತರುವ ವೇಳೆ ತನ್ನ ಮೇಲೆ ಹಲ್ಲೆಯಾಗಿದ್ದು, ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿರುವುದಾಗಿ ಯುವತಿ ಹೇಳಿದ್ದಳು. ಆಸ್ಪತ್ರೆ ಬಿಲ್ ಪಾವತಿಸಲು ಸಹ ಹಣ ಕೇಳಿದ್ದಳು. ಆಕೆ ಮೇಲೆ ಅನುಮಾನ ಬಂದಿತ್ತು. ಪರಿಚಯಸ್ಥರೊಬ್ಬರನ್ನು ಆಸ್ಪತ್ರೆಗೆ ಕಳುಹಿಸಿ ವಿಚಾರಿಸಿದಾಗ, ವರ್ಷಾ ಎಂಬುವವರು ಯಾರೂ ದಾಖಲಾಗಿಲ್ಲವೆಂಬುದು ಗೊತ್ತಾಗಿತ್ತು. ಅವಾಗಲೇ ವರ್ಷಾ ಸ್ನೇಹಿತೆ ಎನ್ನಲಾದ ಮಂಜುಳಾಗೆ ಕರೆ ಮಾಡಿದ್ದೆ. ₹ 55 ಲಕ್ಷ ಸಾಲ ಮಾಡಿ ವರ್ಷಾರನ್ನು ಆಸ್ಪತ್ರೆಯಿಂದ ಕರೆದುಕೊಂಡು ಬಂದಿರುವುದಾಗಿ ಹೇಳಿದ್ದರು. ಆಸ್ಪತ್ರೆಗೆ ನೀಡಿರುವ ಹಣ ನೀಡಬೇಕು. ಇಲ್ಲದಿದ್ದರೆ, ವರ್ಷಾ ಜೊತೆಗಿನ ಸಲುಗೆ ವಿಷಯವನ್ನು ಎಲ್ಲರಿಗೂ ಹೇಳಿ ಮರ್ಯಾದೆ ತೆಗೆಯುವುದಾಗಿ ಬೆದರಿಸಿದ್ದರು’ ಎಂದು ಸ್ವಾಮೀಜಿ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ಹೇಳಿವೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago