ವಾಷಿಂಗ್ಟನ್,: “ಫೇಸ್‌ಬುಕ್‌ನಲ್ಲಿ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳನ್ನು ಶಿಫಾರಸು ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ” ಎಂದು ಸಾಮಾಜಿಕ ಮಾಧ್ಯಮ ಸಂಸ್ಥೆ ಫೇಸ್‌ಬುಕ್‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್ ಜುಕರ್‌ಬರ್ಗ್ ತಿಳಿಸಿದ್ದಾರೆ.
ಅಮೇರಿಕಾ ಅಧ್ಯಕ್ಷೀಯ ಚುನಾವಣೆಗೂ ಮೊದಲು ಫೇಸ್‌ಬುಕ್ ಬಳಕೆದಾರರಿಗೆ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುತ್ತದೆ ಎಂದು ಕಂಪೆನಿ ತಿಳಿಸಿದ್ದು, ಆ ನಿಯಮಗಳನ್ನು ಈಗ ಜಾಗತಿಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದಿದೆ.
ಫೇಸ್‌ಬುಕ್‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್ ಜುಕರ್‌ಬರ್ಗ್ ಅವರಿಗೆ ಪತ್ರ ಬರೆದಿದ್ದ ಅಮೇರಿಕಾದ ಸೆನಟರ್ ಎಡ್ವರ್ಡ್ ಮಾರ್ಕಿನ್ ಅವರು, “ದ್ವೇಷ ಹಾಗೂ ತಾರತಮ್ಯದ ವಿಷಯಗಳನ್ನು ಪ್ರಸಾರ ಮಾಡುವವರು ವಿರುದ್ದ ಸೂಕ್ತವಾದ ಕ್ರಮ ತೆಗೆದುಕೊಳ್ಳಬೇಕು”ಎಂದಿದ್ದರು.
ಫೇಸ್‌ಬುಕ್‌ನ ಗಳಿಕೆಯ ವಿಚಾರವಾಗಿ ವಿಶ್ಲೇಷಕರ ಜೊತೆ ಸಂವಾದ ನಡೆಸಿ ಜುಕರ್‌ಬರ್ಗ್, “ಫೇಸ್‌ಬುಕ್ ಕಂಪೆನಿಯು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಇದರೊಂದಿಗೆ ರಾಜಕೀಯ ವಿಚಾರದ ಬಗೆಗಿನ ಚರ್ಚೆಗಳನ್ನು ಕಡಿಮೆ ಮಾಡುವ ವಿಷಯದ ಬಗ್ಗೆಯೂ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…