ಬೆಂಗಳೂರು: ಪ್ರವಾದಿ ನಿಂದನೆಯ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ತಾನೇ ಹಾಕಿರುವುದಾಗಿ ಡಿ.ಜೆ.ಹಳ್ಳಿ ಗಲಭೆಗೆ ಕಾರಣನಾದ ಆರೋಪಿ ನವೀನ್ ತಪ್ಪೊಪ್ಪಿಕೊಂಡಿದ್ದಾನೆ.
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿ ನವೀನ್ ಅನ್ನು ಪೂರ್ವ ವಿಭಾಗದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ, ತಾನು ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿ ಕಮೆಂಟ್ ಜತೆಗೆ ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
7 ಗಂಟೆ ಸುಮಾರಿಗೆ ಪೋಸ್ಟ್ ಮಾಡಿ 8 ಗಂಟೆಗೆ ಅದನ್ನು ಡಿಲೀಟ್ ಮಾಡಿದ್ದೆ. ಆದರೆ, ಆ ಒಂದು ಪೋಸ್ಟ್ ನಿಂದಾಗಿ ಇಂತಹ ಘಟನೆಗಳು ನಡೆಯುತ್ತವೆ ಎಂದು ತಾನು ಊಹಿಸಿರಲಿಲ್ಲ ಎಂದು ನವೀನ್ ಪೊಲೀಸರಿಗೆ ತಿಳಿಸಿದ್ದಾನೆ.
ಶಾಸಕ ಅಖಂಡ ಶ್ರೀನಿವಾಸ್ ಅಕ್ಕನ ಮಗನಾಗಿರುವ ಆರೋಪಿ ನವೀನ್ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಆರೋಪ ಕೇಳಿಬಂದಿತ್ತು. ಇದು ಗಲಭೆಗೂ ಕಾರಣವಾಗಿತ್ತು. ಮಹಮ್ಮದ್ ಪೈಗಂಬರ್ ಬಗ್ಗೆ ಕೆಟ್ಟದಾಗಿ ಸ್ಟೇಟಸ್ ಹಾಕಿ ಬಳಿಕ ಡಿಲೀಟ್ ಮಾಡಿದ್ದಾಗಿ ನವೀನ್ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…