ಅಂತಾರಾಷ್ಟ್ರೀಯ ನ್ಯೂಸ್

ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಗೆ ಕಠಿಣ ಸಂದೇಶ ರವಾನಿಸಿದ ಪ್ರಧಾನಿ ಮೋದಿ!

ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಗೆ ಕಠಿಣ ಸಂದೇಶ ರವಾನಿಸಿದ ಪ್ರಧಾನಿ ಮೋದಿ!

ವಿಶ್ವಾದ್ಯಂತ ಹೊಸದೊಂದು ಹಗರಣ ಸದ್ದು ಮಾಡುತ್ತಿದೆ‌. ಅಮೇರಿಕಾ, ಬ್ರಿಟನ್ ಸಂಸತ್ತಿನಲ್ಲಿ ಈಗಾಗಲೇ ಫೇಸ್‌ಬುಕ್‌ ಹಗರಣ ಭಾರೀ ಸದ್ದು ಮಾಡಿದ್ದು, ಭಾರತದಲ್ಲಿಯೂ ತೀವ್ರ ರಾಜಕೀಯ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ ಈ ಹಗರಣದಲ್ಲಿ ಭಾಗಿಯಾಗಿದೆ ಎಂದು ಬಿಜೆಪಿ ನೇರವಾಗಿ ಆರೋಪಿಸಿದೆ. ಅಂತರಾಷ್ಟ್ರೀಯ ಮಟ್ಟದ ದೊಡ್ಡ ಹಗರಣವೊಂದರ ಕುರಿತಾಗಿ ಭಾರತದಲ್ಲಿಯೂ ಭಾರಿ ರಾಜಕೀಯ ಕೆಸರೆರಚಾಟ ನಡೆಯುವ ಲಕ್ಷಣಗಳು ಕಂಡು ಬರುತ್ತಿವೆ.

ಯಾವುದಿದು ಫೇಸ್ ಬುಕ್ ಹಗರಣ..?

ಮಾಹಿತಿ ವಿಶ್ಲೇಷಕ ಸಂಸ್ಥೆ ಕೇಂಬ್ರಿಜ್ ಅನಲಿಟಿಕಾ ಫೇಸ್‌ಬುಕ್‌ ಸಹಯೋಗದಲ್ಲಿ ‘ವ್ಯಕ್ತಿತ್ವ ಕುರಿತ ಕ್ವಿಜ್’ ಮೂಲಕ 5 ಕೋಟಿ ಗ್ರಾಹಕರ ಮಾಹಿತಿ ಸಂಗ್ರಹಿಸಿತ್ತು. ಲಂಡನ್ ಮೂಲದ ಕೇಂಬ್ರಿಡ್ಜ್ ಅನಾಲಿಟಿಕಾ ಎನ್ನುವ ಈ ಸಂಸ್ಥೆಯು ಅಮೆರಿಕ ಅಧ್ಯಕ್ಷ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪರವಾಗಿ ಮತ್ತು ಬ್ರಿಟನ್ ಚುನಾವಣೆಯಲ್ಲಿ ಈ ಡಾಟಾ ವನ್ನು ದುರ್ಬಳಿಕೆ ಮಾಡಿತ್ತು ಎಂಬ ಆರೋಪವಿದೆ. ಈ ಪ್ರಕರಣ ಜಾಗತಿಕವಾಗಿ ಗಂಭೀರ ತಿರುವು ಪಡೆದಿದ್ದು, ಫೇಸ್‌ಬುಕ್‌ ನ ಅಸ್ತಿತ್ವಕ್ಕೂ ಅಪಾಯ ತರುವಸ್ಟರ ಮಟ್ಟಿಗೆ ಬೆಳೆದಿದೆ. ಸಿಇಒ ಮಾರ್ಕ್ ಜುಕರ್ ಬರ್ಗ್ ಮಾಧ್ಯಮಗಳ ಕಣ್ಣು ತಪ್ಪಿಸಿಕೊಂಡು, ಬಹುತೇಕ ತಲೆಮರೆಸಿಕೊಂಡಿದ್ದಾರೆ.

ಬಿಜೆಪಿ ವಾದವೇನು..?

ಭಾರತದಲ್ಲಿ ಕಾಂಗ್ರೆಸ್ ಪಕ್ಷ ಜನರ ಮೇಲೆ ಪರಿಣಾಮ ಬೀರಲು ಕೇಂಬ್ರಿಜ್‌ ಅನಾಲಿಟಿಕಾ ಸಂಸ್ಥೆಯ ಡಾಟಾವನ್ನು ಬಳಸಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ. ಸುಳ್ಳು ಸುದ್ದಿಗಳಿಂದ ಜನರ ದಿಕ್ಕು ತಪ್ಪಿಸುವ ಅನಾಲಿಟಿಕಾ ಡೇಟಾಗಳಿಂದಲೇ ರಾಹುಲ್ ಗಾಂಧಿಯವರ ಟ್ವಿಟ್ಟರ್ ಫಾಲೋವರ್ ಗಳ ಸಂಖ್ಯೆಯಲ್ಲಿ ಒಮ್ಮೆಲೆ ಏರಿಕೆ ಕಂಡಿದೆ ಎಂದು ಬಿಜೆಪಿ ಆರೋಪಿಸಿದೆ. ಎಷ್ಟು ಕೋಟಿ ಭಾರತೀಯರ ಡೇಟಾವನ್ನು ಕಾಂಗ್ರೆಸ್ ಈ ಅನಾಲಿಟಿಕಾ ಕಂಪೆನಿ ಜೊತೆ ವಿನಿಮಯ ಮಾಡಿಕೊಂಡಿದೆ ಎಂಬುದನ್ನು ಬಹಿರಂಗ ಪಡಿಸಬೇಕೆಂದು ಕಾಂಗ್ರೆಸ್ ಗೆ ಭಾರತೀಯ ಜನತಾ ಪಕ್ಷ ಆಗ್ರಹಿಸಿದೆ.

ಮೋದಿ ಖಡಕ್ ಸಂದೇಶ!

ರಾಷ್ಟ್ರದ ಭದ್ರತೆಯ ವಿಷಯದಲ್ಲಿ ರಾಜಿಯಾಗುವ ವಿಷಯವೇ ಇಲ್ಲ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಾಗ್ಗೆ ಹೇಳುತ್ತಿರುತ್ತಾರೆ. ಇದು ಕೂಡ ರಾಷ್ಟ್ರದ ಭದ್ರತೆಯ ವಿಷಯವೇ ಆಗಿರುವುದರಿಂದ ಮೋದಿಯವರು ಗಂಭೀರವಾಗಿ ಪರಿಗಣಿಸಿದ್ದಾರೆಂದು ತಿಳಿದು ಬಂದಿದೆ. ಹಾಗಾಗಿಯೇ ರವಿಶಂಕರ್ ಪ್ರಸಾದ್ ರವರಿಂದ ತುರ್ತು ಪತ್ರಿಕಾಗೋಷ್ಠಿ ಕರೆಸಿ ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಐದು ಕೋಟಿ ಫೇಸ್‌ಬುಕ್‌ ಬಳಕೆದಾರರ ವೈಯಕ್ತಿಕ ಮಾಹಿತಿ ರಾಜಕೀಯ ಕಾರಣಗಳಿಗಾಗಿ ಸೋರಿಕೆಯಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್‌ ಜುಕರ್‌ಬರ್ಗ್‌ಗೆ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಎಚ್ಚರಿಕೆ ನೀಡಿ, ಭಾರತೀಯರ ಮಾಹಿತಿ ಸೋರಿಕೆಯಾಗಿದ್ದರೆ ನಾವು ಕ್ಷಮಿಸುವುದಿಲ್ಲ ಎಂದಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿರುವ ರವಿ ಶಂಕರ್‌, ”ಮಿ. ಮಾರ್ಕ್‌ ಜುಕರ್‌ ಬರ್ಗ್‌ ನಿಮಗೆ ನಮ್ಮ ಐಟಿ ಸಚಿವರ ಕುರಿತು ಮಾಹಿತಿ ಇದೆ ಎಂದು ಕೊಳ್ಳುತ್ತೇವೆ. ಒಂದು ವೇಳೆ ನಮ್ಮವರ ಯಾವುದೇ ಮಾಹಿತಿ ಸೋರಿಕೆಯಾಗಿದ್ದರೆ ನಾವು ಸಹಿಸಿಕೊಳ್ಳುವುದಿಲ್ಲ. ನಮ್ಮಲ್ಲಿ ಐಟಿ ಕಾಯ್ದೆಯಡಿ ಕಠಿಣವಾದ ನಿಯಮಗಳನ್ನು ಹೊಂದಿದ್ದೇವೆ. ಅಗತ್ಯ ಬಿದ್ದರೆ ನಿಮ್ಮನ್ನು ನೇರವಾಗಿ ಇಲ್ಲಿಗೇ ಕರೆಸಬಹುದಾದ ತಾಕತ್ತು ಇದೆ” ಎಂದು ಕಟು ಶಬ್ಧಗಳಲ್ಲಿ ಎಚ್ಚರಿಕೆ ನೀಡಿದ್ದಾರೆ.

ಜುಕರ್ ಬರ್ಗ್ ನಾಪತ್ತೆ!

ಕೇಂಬ್ರಿಡ್ಜ್ ಅನಾಲಿಟಿಕಾ ಹಗರಣವು ವಿಶ್ವಾದ್ಯಂತ ಸದ್ದು ಮಾಡಿದೆ. ಆದರೆ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಮಾತ್ರ ಅಕ್ಷರಶಃ ನಾಪತ್ತೆಯಾಗಿದ್ದಾರೆ. ಅಮೇರಿಕ ಕಾಂಗ್ರೆಸ್ ಜುಕರ್ ಬರ್ಗ್ ಗೆ ಸಮನ್ಸ್ ನೀಡಿದೆ. ಅಂತರರಾಷ್ಟ್ರೀಯ ಒತ್ತಡ ಹೆಚ್ಚುತ್ತಿದ್ದರೂ ಜುಕರ್ ಬರ್ಗ್ ಮಾತ್ರ ಮೌನಕ್ಕೆ ಶರಣಾಗಿದ್ದಾರೆ. ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲಿಯೂ ಜುಕರ್ ಬರ್ಗ್ ಕಾಣ ಸಿಗುತ್ತಿಲ್ಲ. ಎಲ್ಲಿದ್ದೀರಾ ಜುಕರ್ ಬರ್ಗ್ ಎಂದು ಟ್ವಿಟ್ಟರ್ ನಲ್ಲಿ ಲಕ್ಷಾಂತರ ಜನ ಫೇಸ್‌ಬುಕ್‌ ಸಂಸ್ಥಾಪಕನ ಕಾಲೆಳೆದಿದ್ದಾರೆ. ಒಟ್ಟಾರೆ ಜಗತ್ತಿನ ಅತಿದೊಡ್ಡ ಸಾಮಾಜಿಕ ಜಾಲತಾಣದ ಮೇಲೆ ತನಿಖೆಯ ತೂಗುಗತ್ತಿ ನೇತಾಡುತ್ತಿದೆ. ಐದು ಕೋಟಿ ಫೇಸ್‌ಬುಕ್‌ ಬಳೆದಾರರ ವಯಕ್ತಿಕ ಮಾಹಿತಿ ಸೋರಿಕೆಯಾಗಿರುವುದು ಸಾಬೀತಾದರೆ ಫೇಸ್‌ಬುಕ್‌ ಗೆ ಶಾಶ್ವತ ಬೀಗ‌ ಬೀಳುವ ಸಾಧ್ಯತೆಯೂ ದಟ್ಟವಾಗಿದೆ!

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago