Featured

ಫೈನಾನ್ಸ್‌  ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ – vishwanews24

ಫೈನಾನ್ಸ್‌  ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ

ದಾವಣಗೆರೆ: ಖಾಸಗಿ ಫೈನಾನ್ಸ್‌  ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು  ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ನಿವಾಸಿ ಪುಷ್ಪಲತ (46) ಅತ್ಮಹತ್ಯೆಗೆ ಶರಣಾದ ಶಿಕ್ಷಕಿ ಎಂದು ತಿಳಿದು ಬಂದಿದೆ. ಅವರು ತುಂಗಾಭದ್ರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊನ್ನಾಳಿಯಲ್ಲಿ ಮನೆ ಕಟ್ಟಲು ಶಿವಮೊಗ್ಗ ಮೂಲದ ಖಾಸಗಿ ಮೈಕ್ರೋ ಫೈನಾನ್ಸ್ ಹಾಗೂ ಕೈಗಡವಾಗಿ ಲಕ್ಷಾಂತರ ರೂ. ಸಾಲ ಮಾಡಿದ್ದರು.

ಸರಿಯಾಗಿ ಪಾವತಿ ಮಾಡದ ಹಿನ್ನೆಲೆ 20 ದಿನಗಳ ಹಿಂದೆ ಪುಷ್ಪಲತ ದಂಪತಿ ವಿರುದ್ಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಫೈನಾನ್ಸ್‌ ಸಿಬ್ಬಂದಿ ದೂರು ನೀಡಿದ್ದರು. ದೂರು ದಾಖಲಾದ ಬಳಿಕ ಹೊನ್ನಾಳಿ ಠಾಣೆ ಪೊಲೀಸರು ಫೈನಾನ್ಸ್ ಕಂಪನಿಯಿಂದ ಮುಚ್ಚಳಿಕೆ ಬರೆಸಿಕೊಂಡಿದ್ದರು. ಸೋಮವಾರ ಬೆಳಗಿನ ಜಾವ ತುಂಗಾಭದ್ರ ನದಿಗೆ ಹಾರಿ ಅವರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

ತುಂಗಭದ್ರಾ ನದಿಗೆ ಪುಷ್ಪಲತ ಹಾರಲು ಹೊರಟಿರುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ನದಿ ದಂಡೆಯ ಬಳಿ ಕುಳಿತು ಆಳವಾಗಿ ಯೋಚಿಸಿ ನದಿಗೆ ದುಮುಕಿದ್ದಾರೆ. ಈ ದೃಶ್ಯ ರಾಘವೇಂದ್ರಸ್ವಾಮಿ ಮಠದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶಿಕ್ಷಕಿಯ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಹೊನ್ನಾಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

5 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

5 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

5 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

7 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

7 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago