ದಾವಣಗೆರೆ: ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ನಿವಾಸಿ ಪುಷ್ಪಲತ (46) ಅತ್ಮಹತ್ಯೆಗೆ ಶರಣಾದ ಶಿಕ್ಷಕಿ ಎಂದು ತಿಳಿದು ಬಂದಿದೆ. ಅವರು ತುಂಗಾಭದ್ರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊನ್ನಾಳಿಯಲ್ಲಿ ಮನೆ ಕಟ್ಟಲು ಶಿವಮೊಗ್ಗ ಮೂಲದ ಖಾಸಗಿ ಮೈಕ್ರೋ ಫೈನಾನ್ಸ್ ಹಾಗೂ ಕೈಗಡವಾಗಿ ಲಕ್ಷಾಂತರ ರೂ. ಸಾಲ ಮಾಡಿದ್ದರು.
ಸರಿಯಾಗಿ ಪಾವತಿ ಮಾಡದ ಹಿನ್ನೆಲೆ 20 ದಿನಗಳ ಹಿಂದೆ ಪುಷ್ಪಲತ ದಂಪತಿ ವಿರುದ್ಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಫೈನಾನ್ಸ್ ಸಿಬ್ಬಂದಿ ದೂರು ನೀಡಿದ್ದರು. ದೂರು ದಾಖಲಾದ ಬಳಿಕ ಹೊನ್ನಾಳಿ ಠಾಣೆ ಪೊಲೀಸರು ಫೈನಾನ್ಸ್ ಕಂಪನಿಯಿಂದ ಮುಚ್ಚಳಿಕೆ ಬರೆಸಿಕೊಂಡಿದ್ದರು. ಸೋಮವಾರ ಬೆಳಗಿನ ಜಾವ ತುಂಗಾಭದ್ರ ನದಿಗೆ ಹಾರಿ ಅವರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
ತುಂಗಭದ್ರಾ ನದಿಗೆ ಪುಷ್ಪಲತ ಹಾರಲು ಹೊರಟಿರುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ನದಿ ದಂಡೆಯ ಬಳಿ ಕುಳಿತು ಆಳವಾಗಿ ಯೋಚಿಸಿ ನದಿಗೆ ದುಮುಕಿದ್ದಾರೆ. ಈ ದೃಶ್ಯ ರಾಘವೇಂದ್ರಸ್ವಾಮಿ ಮಠದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿಕ್ಷಕಿಯ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…