ಫೈನಾನ್ಸ್ ಸಿಬ್ಬಂದಿ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ಯುವಕ ನೇಣಿಗೆ ಶರಣು
ದಾವಣಗೆರೆ: ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವುದು ನ್ಯಾಮತಿ ತಾಲೂಕಿನ ಮಾಚಿಗೊಂಡನಹಳ್ಳಿಯಲ್ಲಿ ನಡೆದಿದೆ.
ಯಶವಂತ್ ನಾಯ್ಕ (24) ನೇಣಿಗೆ ಶರಣಾದ ಯುವಕ. ಈತ ಶಿವಮೊಗ್ಗದ ಫೈನಾನ್ಸ್ ಒಂದರಲ್ಲಿ 5 ಲಕ್ಷ ರೂ. ಸಾಲ ಪಡೆದಿದ್ದ. ಸಾಲ ಕಟ್ಟಲಿಲ್ಲ ಎಂದರೆ ಮನೆ ಜಪ್ತಿ ಮಾಡುವುದಾಗಿ ಖಾಸಗಿ ಪೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದರು. ಇನ್ನೊಂದು ಕಡೆ ಬೈಕ್ ಅಡವಿಟ್ಟು ಶಿವಮೊಗ್ಗದ ವ್ಯಕ್ತಿಯೊಬ್ಬರ ಬಳಿ 40 ಸಾವಿರ ರೂ. ಸಾಲ ಮಾಡಿದ್ದ. ಸಾಲ ಕಟ್ಟದ ಹಿನ್ನೆಲೆ ಮನೆ ಮುಂದೆ ಬಂದು ಅವರು ಗಲಾಟೆ ಮಾಡಿದ್ದರು. ಇದರ ಜೊತೆ ಖಾಸಗಿ ಫೈನಾನ್ಸ್ ಸಿಬ್ಬಂದಿ ಸಹ ಕಿರುಕುಳ ನೀಡುತ್ತಿದ್ದರು ಎಂದು ಯುವಕನ ತಾಯಿ ಆರೋಪಿಸಿದ್ದಾರೆ.
ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಮೃತ ಯುವಕನ ತಾಯಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆಗೆ ಮುಂದಾಗಿದ್ದಾರೆ.
ಡೆತ್‌ನೋಟ್‌ನಲ್ಲಿ ಏನಿದೆ?
ಸಾಲಗಾರರ ಕಿರುಕುಳಕ್ಕಾಗಿ ಸಾಯುತ್ತಿದ್ದೇನೆ. ಅಪ್ಪ ನೀನು ಅಂದು ಕೊಂಡಂತೆ ನಾನು ದುಡ್ಡು ಹಾಳು ಮಾಡಿಲ್ಲ. ಈ ಕೇಸ್‌ನಲ್ಲಿ ನಾನು ಇಷ್ಟಪಡುತ್ತಿದ್ದ ಹುಡುಗಿಯನ್ನು ಎಳೆದು ತರಬೇಡಿ. ಅವಳು ಎಲ್ಲಿದ್ದರೂ ಚೆನ್ನಾಗಿರಬೇಕು. ಅವಳು ನನ್ನ ಮೇಲೆ ಪ್ರಾಣವನ್ನೇ ಇಟ್ಟುಕೊಂಡಿದ್ದಳು ಎಂದು ಬರೆದಿದ್ದಾನೆ. ಅಲ್ಲದೇ, ತಾನು ಮಾಡಿದ್ದ ಸಾಲದ ಬಗ್ಗೆ ಬರೆದು, ದಯವಿಟ್ಟು ನನ್ನನ್ನು ಕ್ಷಮಿಸಿ ಅಪ್ಪ ಅಮ್ಮ ಎಂದು ಉಲ್ಲೇಖಿಸಿದ್ದಾನೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…