Featured

ಫೈರ್ ಸೇಫ್ಟಿ ಕ್ಲಿಯರೆನ್ಸ್‌ಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಮಾನ ಕಾಲಾವಕಾಶ ನೀಡಿ : ಡಾ.ಧನಂಜಯ ಸರ್ಜಿ – vishwanews24

ಫೈರ್ ಸೇಫ್ಟಿ ಕ್ಲಿಯರೆನ್ಸ್‌ಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಮಾನ ಕಾಲಾವಕಾಶ ನೀಡಿ : ಡಾ.ಧನಂಜಯ ಸರ್ಜಿ

ಬೆಂಗಳೂರು : ಎನ್.ಬಿ.ಸಿ ಕೋಡ್ (National Building Code) ಪ್ರಕಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಒಂದೇ ನಿಯಮ ಇದೆ ಹಾಗಾಗಿ ತಾರತಮ್ಯ ಮಾಡದೇ ಸರ್ಕಾರಿ ಆಸ್ಪತ್ರೆಗೆ ಫೈರ್ ಕ್ಲಿಯರೆನ್ಸ್ ಗೆ ಎಷ್ಟು ಸಮಯವಕಾಶ ನೀಡಲಾಗುತ್ತಿದೆಯೊ ಖಾಸಗಿ ಆಸ್ಪತ್ರೆಗಳಿಗೂ ಅಷ್ಟೇ ಸಮಯವಕಾಶ ನೀಡಿ, ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚು ಕಾಲಾವಕಾಶ ನೀಡಿ ಖಾಸಗಿ ಆಸ್ಪತ್ರೆಗಳಿಗೆ ಕಡಿಮೆ ಕಾಲಾವಕಾಶ ನೀಡಲಾಗುತ್ತಿದೆ ಎಂದು ಸೋಮವಾರ ವಿಧಾನ ಪರಿಷತ್ತಿನಲ್ಲಿ ನಡೆದ 156 ನೇ ಅಧಿವೇಶನ ದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಕೇಳಿದರು.

ಕರ್ನಾಟಕ ರಾಜ್ಯದಲ್ಲಿ 2878 ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ 14 ಮಾತ್ರ ಫೈರ್ ಕ್ಲಿಯರೆನ್ಸ್ ಆಗಿದೆ ಅಂದರೆ ಶೇ 00.5% ಮಾತ್ರ, 5850 ಖಾಸಗಿ ಆಸ್ಪತ್ರೆಗಳಲ್ಲಿ 315 ಮಾತ್ರ ಫೈರ್ ಕ್ಲಿಯರೆನ್ಸ್ ಅಂದರೆ ಶೇ .005% ಮಾತ್ರ ಆಗಿದೆ, ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಫೈರ್ ಸೇಫ್ಟಿ ಕ್ಲಿಯರೆನ್ಸ್ ತೆಗೆದುಕೊಳ್ಳಲು ಎಷ್ಟು ಕಾಲಾವಕಾಶ ಬೇಕು ಎಂದು ಕೇಳಿದರು.

ಕೇವಲ 2 ವರ್ಷದಲ್ಲಿ ರಾಜ್ಯದ 5 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಹಿಂದೆ 2014ರಲ್ಲೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಅಂದಿನ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರು ತೀವ್ರ ನಿಗಾ ಘಟಕದಲಿದ್ದ 28 ನವಜಾತ ಶಿಶುಗಳು ಮತ್ತು 18 ದೊಡ್ಡ ಮಕ್ಕಳನ್ನು ಒಟ್ಟು 46 ಮಕ್ಕಳನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು, 46 ಜೀವಗಳನ್ನು ಉಳಿಸುವ ಜವಾಬ್ದಾರಿ ನಮ್ಮದಾಗಿತ್ತು ಇದರಲ್ಲಿ ಸರ್ಜಿ ಆಸ್ಪತ್ರೆ ಸಫಲ ಆಗಿದೆ, ಆದ್ದರಿಂದ ಮುಂದೆ ಈ ಘಟನೆಗಳು ಮರುಕಳಿಸದಂತೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಫೈರ್ ಸೇಫ್ಟಿ ಕ್ಲಿಯರೆನ್ಸ್ ಮಾಡಬೇಕು ಎಂದು ಒತ್ತಾಯಿಸಿದರು. ಆಯುಷ್ಮಾನ್ ಭಾರತ್ ಯೋಜನೆ ಅಡಿ ಸರ್ಕಾರ 63 ಲಕ್ಷ ರೋಗಿಗಳನ್ನು ಚಿಕಿತ್ಸೆ ನೀಡಿದೆ ಇದರಲ್ಲಿ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಇರುವಂತಹ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸುತ್ತದೆ ಆದರೆ ಕೆ.ಪಿ,ಎಂ.ಎ ಪ್ರಕಾರ ಫೈರ್ ಸೇಫ್ಟಿ ಕ್ಲಿಯರೆನ್ಸ್ ಮಾತ್ರ ಇಲಾಖೆ ಕೊಡುತ್ತಿಲ್ಲ ಇದರಿಂದ ಲಕ್ಷಾಂತರ ರೋಗಿಗಳಿಗೆ ಅನ್ಯಾಯವಾಗುತ್ತಿದೆ ಹಾಗಾಗಿ ನಿಯಮ ಸಡಿಲಿಕರಣಗೊಳಿಸಲು ಮಹರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿ ವೈದ್ಯಕೀಯ ಸಂಸ್ಥೆಗಳಿಗೆ ಪ್ರತ್ಯೇಕ ಅಗ್ನಿ ಸುರಕ್ಷತಾ ಕಾಯ್ದೆಯನ್ನು ತರಲಾಗಿದೆ ಆದ್ದರಿಂದ ಕರ್ನಾಟಕದಲ್ಲೂ ಈ ಕಾಯ್ದೆ ತರವುಂತಾಗಬೇಕು ಎಂದು ಕೋರಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago