ಕೇರಳ: ಮೊಬೈಲ್ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ ಕೇರಳದಲ್ಲಿ ನಡೆದಿದೆ.
ಸೂರ್ಯ ಸುರೇಂದ್ರನ್ ಎಂಬ 24 ವರ್ಷದ ಯುವತಿ ಓಲಿಯಾಂಡರ್ ಹೂವು ಸ್ಥಳೀಯವಾಗಿ ಮಲಯಾಳಂ ಭಾಷೆಯಲ್ಲಿ ‘ಅರಳಿ ಪೂ’ ಎಂದು ಕರೆಯಲಾಗುವ ಹೂವು ತಿಂದಿದ್ದಾಳೆ. ವೃತ್ತಿಯಲ್ಲಿ ನರ್ಸ್ ಆಗಿರುವ ಯುವತಿ, ಭಾನುವಾರದಂದು ತನ್ನ ಹೊಸ ಕೆಲಸವನ್ನು ಪ್ರಾರಂಭಿಸಲು ನೆಡುಂಬಸ್ಸೆರಿ ವಿಮಾನ ನಿಲ್ದಾಣದಿಂದ ಗುರುವಾರ ಯುಕೆಗೆ ಪ್ರಯಾಣಿಸಲು ಸಿದ್ಧತೆ ನಡೆಸಿದ್ದಳು. ಆದರೆ ಇದ್ದಕ್ಕಿದ್ದಂತೆ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದ ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಆಕೆಯ ಸಾವಿಗೆ ಕಾರಣ ಹೃದಯಾಘಾತ ಎಂದು ಘೋಷಿಸಲಾಗಿದೆ.
ಅಲಪ್ಪುಳ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಆಕೆಯ ರಕ್ತದಲ್ಲಿ ವಿಷಕಾರಿ ಅಂಶ ಕಂಡುಬಂದಿದೆ. ಆಕೆಯ ಹಠಾತ್ ಸಾವಿನ ಕಾರಣವನ್ನು ಪತ್ತೆ ಹಚ್ಚಲಾಗಿದೆ ಎಂದು ಹರಿಪಾಡ್ ಠಾಣಾಧಿಕಾರಿ ಕೆ.ಅಭಿಲಾಷ್‌ಕುಮಾರ್ ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅರಳಿ ಹೂವು ಮತ್ತು ಎಲೆ ತಿಂದದ್ದೇ ಸಾವಿಗೆ ಕಾರಣ ಎಂದು ತಿಳಿದು ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಹೊರಡುವ ಮುನ್ನ ಫೋನ್‌ನಲ್ಲಿ ಮಾತನಾಡುವಾಗ, ಅವಳು ಹೂವನ್ನು ಕಿತ್ತು ಸೇವಿಸಿದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಆಕೆ ನಿರಂತರವಾಗಿ ವಾಂತಿ ಮಾಡಿಕೊಂಡಿದ್ದಳು ಎಂದು ತಿಳಿದು ಬಂದಿದೆ.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…