Featured

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು – Vishwanews24

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಕಣಗಿಲೆ ಹೂ ತಿಂದ ಯುವತಿ ಸಾವು

ಕೇರಳ: ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ ಕೇರಳದಲ್ಲಿ ನಡೆದಿದೆ.

ಸೂರ್ಯ ಸುರೇಂದ್ರನ್ ಎಂಬ 24 ವರ್ಷದ ಯುವತಿ ಓಲಿಯಾಂಡರ್ ಹೂವು ಸ್ಥಳೀಯವಾಗಿ ಮಲಯಾಳಂ ಭಾಷೆಯಲ್ಲಿ ‘ಅರಳಿ ಪೂ’ ಎಂದು ಕರೆಯಲಾಗುವ ಹೂವು ತಿಂದಿದ್ದಾಳೆ. ವೃತ್ತಿಯಲ್ಲಿ ನರ್ಸ್ ಆಗಿರುವ ಯುವತಿ, ಭಾನುವಾರದಂದು ತನ್ನ ಹೊಸ ಕೆಲಸವನ್ನು ಪ್ರಾರಂಭಿಸಲು ನೆಡುಂಬಸ್ಸೆರಿ ವಿಮಾನ ನಿಲ್ದಾಣದಿಂದ ಗುರುವಾರ ಯುಕೆಗೆ ಪ್ರಯಾಣಿಸಲು ಸಿದ್ಧತೆ ನಡೆಸಿದ್ದಳು. ಆದರೆ ಇದ್ದಕ್ಕಿದ್ದಂತೆ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದ ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಆಕೆಯ ಸಾವಿಗೆ ಕಾರಣ ಹೃದಯಾಘಾತ ಎಂದು ಘೋಷಿಸಲಾಗಿದೆ.

ಅಲಪ್ಪುಳ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಆಕೆಯ ರಕ್ತದಲ್ಲಿ ವಿಷಕಾರಿ ಅಂಶ ಕಂಡುಬಂದಿದೆ. ಆಕೆಯ ಹಠಾತ್ ಸಾವಿನ ಕಾರಣವನ್ನು ಪತ್ತೆ ಹಚ್ಚಲಾಗಿದೆ ಎಂದು ಹರಿಪಾಡ್ ಠಾಣಾಧಿಕಾರಿ ಕೆ.ಅಭಿಲಾಷ್‌ಕುಮಾರ್ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅರಳಿ ಹೂವು ಮತ್ತು ಎಲೆ ತಿಂದದ್ದೇ ಸಾವಿಗೆ ಕಾರಣ ಎಂದು ತಿಳಿದು ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಹೊರಡುವ ಮುನ್ನ ಫೋನ್‌ನಲ್ಲಿ ಮಾತನಾಡುವಾಗ, ಅವಳು ಹೂವನ್ನು ಕಿತ್ತು ಸೇವಿಸಿದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಆಕೆ ನಿರಂತರವಾಗಿ ವಾಂತಿ ಮಾಡಿಕೊಂಡಿದ್ದಳು ಎಂದು ತಿಳಿದು ಬಂದಿದೆ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

4 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

35 minutes ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

47 minutes ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

3 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

17 hours ago