Featured

ಫೋರ್ಬ್ಸ್‌ನ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ ಸತತ 12 ನೇ ಬಾರಿಗೆ  ಅಗ್ರಸ್ಥಾನ ಉಳಿಸಿಕೊಂಡ ಮುಖೇಶ್ ಅಂಬಾನಿ -Vishwanews24

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು  ಫೋರ್ಬ್ಸ್‌ನ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ ಈ ವರ್ಷವೂ ಸತತ 12 ನೇ ಬಾರಿಗೆ  ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಈ ವರ್ಷ ಅವರ ಒಟ್ಟು ಆಸ್ತಿ ಮೌಲ್ಯ 51.4 ಶತಕೋಟಿ ಡಾಲರ್‌ಗೆ ಏರಿದೆ.

‘ಅಂಬಾನಿ ಅವರು ತಮ್ಮ ಆಸ್ತಿಗೆ 4.1 ಬಿಲಿಯನ್ ಡಾಲರ್‌ ಹೆಚ್ಚುವರಿ ಸೇರಿಸಿದ್ದಾರೆ. ತಮ್ಮ ರಿಲಯನ್ಸ್  ಇಂಡಸ್ಟ್ರೀಸ್‌ನ ಮೂರು ವರ್ಷದ ಹಳೆಯ ಟೆಲಿಕಾಂ ಘಟಕವಾದ ಜಿಯೋ, 340 ದಶಲಕ್ಷ ಚಂದಾದಾರರನ್ನು  ಹೊಂದಿರುವ ಭಾರತದ ಅತಿದೊಡ್ಡ ಮೊಬೈಲ್ ಸೇವಾ ಕಂಪೆನಿಗಳಲ್ಲಿ ಒಂದಾಗಿದೆ.’ ಎಂದು ಫೋರ್ಬ್ಸ್  ಹೇಳಿದೆ.

ಈ  ಪಟ್ಟಿಯಲ್ಲಿ ಅಂಬಾನಿ  ಮತ್ತು ಅದಾನಿ ನಂತರ ಅಶೋಕ್ ಲೇಲ್ಯಾಂಡ್ ಮಾಲೀಕರಾದ  ಹಿಂದೂಜಾ ಸಹೋದರರು,  ಶಪೂರ್ಜಿ ಪಲ್ಲೊಂಜಿ ಗ್ರೂಪ್‌ನ ಪಲ್ಲೊಂಜಿ ಮಿಸ್ತ್ರಿ, ಕೊಟಕ್ ಮಹೀಂದ್ರಾ ಬ್ಯಾಂಕಿನ  ಉದಯ್ ಕೊಟಕ್ ಹಾಗೂ ಎಚ್‌ಸಿಎಲ್ ಟೆಕ್ನಾಲಜೀಸ್‌ನ ಶಿವ ನಾಡರ್ ನಂತರದ  ಸ್ಥಾನಗಳಲ್ಲಿದ್ದಾರೆ.  4 ಶತಕೋಟಿ ಡಾಲರ್‌ ಮೊತ್ತದ ಆಸ್ತಿ ಏರಿಕೆಯಿಂದ ಉದಯ್ ಕೊಟಕ್  ಮೊದಲ ಬಾರಿಗೆ ಮೊದಲ ಐದು ಸ್ಥಾನಕ್ಕೆ ಏರಿದ್ದಾರೆ.

ಮೂಲಸೌಕರ್ಯ ವಲಯದ ಉದ್ಯಮಿ ಗೌತಮ್ ಅದಾನಿ ಅವರ ಸಂಪತ್ತಿನಲ್ಲೂ ಗಣನೀಯ ಹೆಚ್ಚಳವಾಗಿದೆ. 15.7  ಶತಕೋಟಿ ಡಾಲರ್ ಮೌಲ್ಯದ ಆಸ್ತಿ ಏರಿಕೆಯೊಂದಿಗೆ ಹಿಂದಿನ ವರ್ಷ ಎಂಟನೇ ಸ್ಥಾನದಲ್ಲಿದ್ದ ಅದಾನಿ, ಪಟ್ಟಿಯಲ್ಲಿ  ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago