Featured

ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆ ; ಕಿರುತೆರೆ ನಟಿ ಚೇತನಾ ರಾಜ್‌ ಸಾವು – Vishwnaews24

‘ಗೀತಾ, ದೊರೆಸಾನಿ’ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಕಿರುತೆರೆ ನಟಿ ಚೇತನಾ ರಾಜ್

ಒಲವಿನ ನಿಲ್ದಾಣʼ ಅನ್ನೋ ಹೊಸ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ..

ಬೆಂಗಳೂರು, : ಫ್ಯಾಟ್‌ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್‌ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ.

ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ನಟಿ ಕುಟುಂಬ ವಾಸವಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ.

ಫ್ಯಾಟ್ ಚಿಕಿತ್ಸೆಗೆಂದು ನಿನ್ನೆ ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ಆಡ್ಮಿಟ್ ಆಗಿದ್ದರು. ಸಂಜೆ ನಾಲ್ಕು ಗಂಟೆ ಹೊತ್ತಿಗೆ ಸಿರಿಯಸ್‌ ಆಗಿ ಶಂಕರಮಠದ ಕಾಡೇ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.ಕಲರ್ಸ್ ಕನ್ನಡದಲ್ಲಿ ಬರುವ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ದಾರಾವಾಹಿಗಳಲ್ಲಿ ಚೇತನಾ ರಾಜ್‌ ನಟಿಸುತ್ತಿದ್ದರು. ಇನ್ನೂ ಬಿಡುಗಡೆಯಾಗದ ಹವಾಯಾಮಿ ಸಿನಿಮಾದಲ್ಲೂ ನಟಿಸಿದ್ದಾರೆ. ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಲರ್ಸ್ ಕನ್ನಡದ ʻಒಲವಿನ ನಿಲ್ದಾಣʼ ಅನ್ನೋ ಹೊಸ ಧಾರವಾಹಿಯಲ್ಲಿ ಮುಖ್ಯ ಪಾತ್ರ ಸಿಕ್ಕಿತ್ತು.

ಪೋಷಕರಿಗೆ ಮಾಹಿತಿ ನೀಡದೇ ಚೇತನಾ ರಾಜ್ ಫ್ಯಾಟ್‌ ಸರ್ಜರಿ ಮಾಡಿಸಿಕೊಂಡಿದ್ದರು. ಸೋಮವಾರ ಬೆಳಗ್ಗೆ 9:30 ಕ್ಕೆ ಆಸ್ಪತ್ರೆಗೆ ದಾಖಲಾಗಿ ಸರ್ಜರಿ ಮಾಡಿಸಿಕೊಂಡಿದ್ದಾರೆ. ನಂತರ ವಿಚಾರ ಗೊತ್ತಾಗಿ ಪೋಷಕರು ಆಸ್ಪತ್ರೆಗೆ ಹೋಗಿದ್ದರು. ಸರ್ಜರಿ ನಂತರ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು ನಟಿ ಪರಿಸ್ಥಿತಿ ಗಂಭೀರವಾಗಿದೆ. ನಾಲ್ಕು ಗಂಟೆಗೆ ಹೆಚ್ಚಿನ ಚಿಕಿತ್ಸೆಗೆ ಮತ್ತೊಂದು ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಅಷ್ಟರಲ್ಲಾಗಲೇ ನಟಿ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಚೇತನಾ ರಾಜ್‌ ಮೃತಪಟ್ಟಿದ್ದಾಳೆ. ಯಾವುದೇ ಪೋಷಕರ ಅನುಮತಿ ಇಲ್ಲದೇ ಹೇಗೆ ಸರ್ಜರಿ ಮಾಡಿದರು. ಆಸ್ಪತ್ರೆಯವರೇ ಚೇತನಾ ರಾಜ್ ಸಾವಿಗೆ ಕಾರಣ. ಚೇತನಾ ರಾಜ್ ದೊಡ್ಡಪ್ಪ ರಾಜಣ್ಣ ಆರೋಪಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago