ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವತಿ – vishwanews24

Featured, ರಾಜ್ಯ ನ್ಯೂಸ್

ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವತಿ

ಬೆಂಗಳೂರು : ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಧಾಮನಗರದಲ್ಲಿ ನಡೆದಿದೆ.

ಮೃತರನ್ನು ವರ್ಷಿಣಿ (21) ಎಂದು ಗುರುತಿಸಲಾಗಿದೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಿರ್ವ : ಸಮಸ್ಯೆಯಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ‌ ಬೇಕಾಗಿದೆ ನೆರವಿನ ಸಹಾಯ ಹಸ್ತ – vishwanews24

Leave a Reply