‘ಫ್ರೀ ಕಾಶ್ಮೀರ’ ಪೋಸ್ಟರ್ ಪ್ರದರ್ಶಿಸಿದ ಯುವತಿ ಪರ ವಕಾಲತ್ತು ವಹಿಸದಿರಲು ವಕೀಲರ ನಿರ್ಧಾರ -Vishwanews24

ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಈಚೆಗೆ ಪ್ರತಿಭಟನೆ ಸಮಯದಲ್ಲಿ ‘ಫ್ರೀ ಕಾಶ್ಮೀರ’ ಫಲಕ ಹಿಡಿದ ಯುವತಿ ಬಿ.ನಳಿನಿ ಪರವಾಗಿ ವಕೀಲರು ವಕಾಲತ್ತು ವಹಿಸಬಾರದು ಎಂದು ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸಭೆ ಮಂಗಳವಾರ ನಿರ್ಣಯ ಕೈಗೊಂಡಿದೆ.

ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶಿಸಿದ ಯುವತಿ ಪರವಾಗಿ ಮೈಸೂರಿನ ಯಾವ ವಕೀಲರೂ ವಕಾಲತು ವಹಿಸಬಾರದು. ಈ ಹಿಂದೆ ಕೂಡ ಇಂತಹ ಪ್ರಕರಣಗಳಲ್ಲಿ ಆರೋಪಿ ಪರ ಯಾರೂ ವಕಾಲತ್ತು ವಹಿಸಿಲ್ಲ. ಶಂಕಿತ ಉಗ್ರರಾದ ಫಹಾದ್ ಮತ್ತು ಅಲಿ ಪ್ರಕರಣದಲ್ಲೂ ವಕಾಲತ್ತು ವಹಿಸಿಲ್ಲ. ಈ ಬಾರಿಯೂ ಇದೇ ದಿಟ್ಟ ನಿರ್ಣಯ ಕೈಗೊಳ್ಳಿ. ಈ ಮೂಲಕ ಸಂಘದ ಗೌರವ ಕಾಪಾಡಿ ಎಂದು ಯುವ ವಕೀಲರು ಮೈಸೂರಿನ ವಕೀಲರ ಸಂಘದ ಅಧ್ಯಕ್ಷ ಆನಂದ ಕುಮಾರ್​ಗೆ ಮನವಿ ಮಾಡಿದ್ದರು.

ಇದಕ್ಕೂ ಮುನ್ನ ಕೆಲವು ವಕೀಲರು ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಳ್ಳಬೇಕು ಎಂದು ಸಂಘಕ್ಕೆ ಮನವಿ ಪತ್ರ ಕೊಟ್ಟಿದ್ದರು. ಈ ಹಿಂದೆ ವಕಾಲತ್ತು ವಹಿಸಿದ್ದ ವಕೀಲ ಪೃಥ್ವಿ ಸಹ ವೈಯಕ್ತಿಕ ಕಾರಣಗಳನ್ನು ನೀಡಿ ಪ್ರಕರಣದಿಂದ ಹಿಂದೆ ಸರಿದಿದ್ದರು. ‌

ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವುದಕ್ಕೆ ಪೊಲೀಸರು ಮಂಗಳವಾರ ಆಕ್ಷೇಪಣೆ ಸಲ್ಲಿಸಬೇಕಿದೆ. ಪ್ರಕರಣ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

17 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago