ಫ್ಲೈಓವರು ಕಟ್ಟಲು 10 ವರ್ಷಗಳಿಗೂ ಅಧಿಕ ಕಾಲ ತೆಗೆದುಕೊಂಡು ಈಗ ವಲ್ಡ್ ಕಪ್ ಗೆದ್ದಂತೆ ಮಾಡುತ್ತಿದ್ದಾರೆ , ನಾನು ನಗರಾಭಿವೃದ್ಧಿ ಸಚಿವನಾಗಿದ್ದ ವೇಳೆ ನಡೆದ ಕಾಮಗಾರಿಯನ್ನು ಒಮ್ಮೆ ನೋಡಿ ಬರಲಿ : ಯು ಟಿ ಖಾದರ್ -Vishwanews24

ಮಂಗಳೂರು : ಪಂಪ್ವೆಲ್ ಫ್ಲೈಓವರ್ ಬ್ರಿಡ್ಜ್ ಹಳೆ ಗಾಡಿಗೆ ಪೈಂಟ್ ಕೊಟ್ಟಂತೆ ಆಗಿದೆ ನಾನು ನಗರಾಭಿವೃದ್ಧಿ ಸಚಿವನಾಗಿದ್ದ ವೇಳೆ ನಡೆದ ಕಾಮಗಾರಿಯನ್ನು ಒಮ್ಮೆ ನೋಡಿ ಬರಲಿ ಎಂದು ಮಾಜಿ ಸಚಿವ ಯು ಟಿ ಖಾದರ್ ವ್ಯಂಗ್ಯವಾಡಿದ್ದಾರೆ.

ಪಂಪ್ವೆಲ್ ಉದ್ಘಾಟನೆ ಬಗ್ಗೆ ಯುಟಿಕೆ ವ್ಯಂಗ್ಯಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಫ್ಲೈಓವರು ಕಟ್ಟಲು 10 ವರ್ಷಗಳಿಗೂ ಅಧಿಕ ಕಾಲ ತೆಗೆದುಕೊಂಡು ಈಗ ವಲ್ಡ್ ಕಪ್ ಗೆದ್ದಂತೆ ಮಾಡುತ್ತಿದ್ದಾರೆ. ಅಲ್ಲಿ ಇನ್ನೂ ಪ್ಯಾಚ್ ವರ್ಕ್ ಆಗಿಲ್ಲ, ಸರ್ವಿಸ್ ಲೇನ್ ಆಗಿಲ್ಲ ಪಾದಾಚಾರಿಗಳಿಗೆ ಓಡಾಡಲು ಸರಿಯಾದ ವ್ಯವಸ್ಥೆ ಆಗಿಲ್ಲ. ದೊಡ್ಡ ಗೂಡ್ಸ್ ಲಾರಿಗಳು ಮೇಲ್ಸೇತುವೆ ಅಡಿಯಲ್ಲಿ ಸಂಚರಿಸುವಂತಿಲ್ಲ ಅದನ್ನೆಲ್ಲಾ ಮೊದಲು ಸರಿಯಾಗಿ ಮಾಡಲಿ ಎಂದರು.

ಒಂಬತ್ತುಕೆರೆ ಪ್ರದೇಶದಲ್ಲಿ ನನೆಗುದಿಗೆ ಬಿದ್ದಿರುವ ಮನೆಗಳ ನಿರ್ಮಾಣದ ಕುರಿತು ವಸತಿ ಸಚಿವರು ಕ್ರಮ ಕೈಗೊಳ್ಳಬೇಕು ಎಂದು ಯು.ಟಿ. ಖಾದರ್ ಆಗ್ರಹಿಸಿದ ಅವರುಈ ಪ್ರದೇಶದಲ್ಲಿ ಇರುವ ಮನೆಗಳನ್ನು ನೆಲಸಮಗೊಳಿಸಿ, ಅಲ್ಲಿ ಅಪಾರ್ಟಮೆಂಟ್ ನಿರ್ಮಿಸುವ ಯೋಜನೆ ಸಿದ್ಧವಾಗಿದೆ. ವಸತಿ ಸಚಿವರು ಈ ಬಗ್ಗೆ ಕ್ರಮ ಕೈಗೊಂಡು, ಶಿಲಾನ್ಯಾಸ ನೆರವೇರಿಸಬೇಕು. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಈ ಯೋಜನೆಯ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಒಂಬತ್ತುಕೆರೆ ಪ್ರದೇಶದ ಮನೆಗಳ ಸಮಸ್ಯೆಯನ್ನು ಟ್ರೋಲ್ ಮಾಡಿದರೆ ಅಲ್ಲಿ ಮನೆಗಳ ನಿರ್ಮಾಣ ಮಾಡಲು ಸಾಧ್ಯವೇ? ಅದರ ಬದಲು ಯೋಜನೆಯನ್ನು ಪೂರ್ಣಗೊಳಿಸುವಂತೆ ಈ ಭಾಗದ ಬಿಜೆಪಿ ಮುಖಂಡರು ವಸತಿ ಸಚಿವರ ಮೇಲೆ ಒತ್ತಡ ತರಬೇಕು ಎಂದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

20 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

20 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago