Featured

ಫ್ಲೈ ಓವರ್ ಮೇಲೆ ಬೈಕ್​ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ – Vishwanews24

ಫ್ಲೈ ಓವರ್ ಮೇಲೆ ಬೈಕ್​ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ

ಬೆಂಗಳೂರು: ಇಲ್ಲಿನ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನವೀನ್ ಕುಮಾರ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ತನ್ನ ಬೈಕನ್ನ ಫ್ಲೈಓವರ್  ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಕಳೆದ 3-4 ತಿಂಗಳಿನಿಂದ ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದಾನೆ. ಬಳಿಕ ಬೈಕ್ ಪಾರ್ಕ್ ಮಾಡಿ, ಫ್ಲೈಓವರ್‌ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

2 ತಿಂಗಳ ಹಿಂದೆಯಷ್ಟೇ ಮದುವೆ:
ಆತ್ಮಹತ್ಯೆ ಮಾಡಿಕೊಂಡ ನವೀನ್ 2 ತಿಂಗಳ ಹಿಂದೆ ಮದುವೆಯಾಗಿದ್ದ, ಕವಿಕಾ (ಕರ್ನಾಟಕ ವಿದ್ಯುತ್ ಕಾರ್ಖಾನೆ)ದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಕೆಲಸದ ಮೇಲೆ ಹೋಗಿ ಬರ್ತೀನಿ ಅಂತಾ ಏಪ್ರಿಲ್ 11ರಂದು ಮನೆಯಿಂದ ಹೊರಟಿದ್ದ ನವೀನ್‌, ಇಂದು (ಏ.12) ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಆತ್ಮಹತ್ಯೆ ಪ್ರಕರಣದ ಕುರಿತು ಬ್ಯಾಟರಾಯನಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

20 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago