ಬೆಂಗಳೂರು: ಇಲ್ಲಿನ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನವೀನ್ ಕುಮಾರ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ತನ್ನ ಬೈಕನ್ನ ಫ್ಲೈಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಕಳೆದ 3-4 ತಿಂಗಳಿನಿಂದ ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದಾನೆ. ಬಳಿಕ ಬೈಕ್ ಪಾರ್ಕ್ ಮಾಡಿ, ಫ್ಲೈಓವರ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
2 ತಿಂಗಳ ಹಿಂದೆಯಷ್ಟೇ ಮದುವೆ:
ಆತ್ಮಹತ್ಯೆ ಮಾಡಿಕೊಂಡ ನವೀನ್ 2 ತಿಂಗಳ ಹಿಂದೆ ಮದುವೆಯಾಗಿದ್ದ, ಕವಿಕಾ (ಕರ್ನಾಟಕ ವಿದ್ಯುತ್ ಕಾರ್ಖಾನೆ)ದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಕೆಲಸದ ಮೇಲೆ ಹೋಗಿ ಬರ್ತೀನಿ ಅಂತಾ ಏಪ್ರಿಲ್ 11ರಂದು ಮನೆಯಿಂದ ಹೊರಟಿದ್ದ ನವೀನ್, ಇಂದು (ಏ.12) ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಆತ್ಮಹತ್ಯೆ ಪ್ರಕರಣದ ಕುರಿತು ಬ್ಯಾಟರಾಯನಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…