ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ 3 ದಿನ(ಮಾರ್ಚ್ 7, 8 , 9) ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸಾಧ್ಯತೆ ಇದೆ. ಇಂದು (ಮಾರ್ಚ್ 7) ಕೋಲಾರ, ಚಿಕ್ಕಮಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ನಾಳೆ (ಮಾರ್ಚ್ 8) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ವಾಯುಭಾರ ಕುಸಿತವಾಗಿದೆ. ಈ ಬಗ್ಗೆ ಎರಡು ದಿನ ಮುಂಚಿತವಾಗಿ ಮಾಹಿತಿ ನೀಡಿದ್ದ ಹವಾಮಾನ ಇಲಾಖೆ, ವಾಯುಭಾರ ಕುಸಿತದ ಪ್ರಭಾವ ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯ ಉತ್ತರ ತಮಿಳುನಾಡು ಕರಾವಳಿಯ ಕಡೆಗೆ ಸಾಗಲಿದೆ ಎಂದು ಹೇಳಿತ್ತು.
ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ತೀವ್ರವಾದ ವಾಯುಭಾರ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಕೂಡ ಎರಡು ದಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸದ್ಯ ಒಣ ಹವೆ ಇದೆ. ಆದರೆ, ಎರಡು ದಿನಗಳ ಕಾಲ ರಾಜ್ಯದ ಹಲವು ಕಡೆ ಗುಡುಗು ಸಹಿತ ಮಳೆ ಆಗಬಹುದು. ಪಶ್ಚಿಮ ಘಟ್ಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಇಂದು, ನಾಳೆ ಹಾಗೂ ಮಾರ್ಚ್ 9 ರಂದು ಕೂಡ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…