ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಮುನ್ಸೂಚನೆ ನೀಡಿದೆ. ನಾಳೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹಳದಿ ಅಲರ್ಟ್ಘೋಷಣೆ ಮಾಡಲಾಗಿದೆ.
ಕರ್ನಾಟಕದ ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 13 ಮತ್ತು 14ರಂದು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ.
ಹಾಗೇ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನವೆಂಬರ್ 14ರಂದು ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಾದ್ಯಂತ ಒಣ ಹವೆ ಮುಂದುವರಿಯಲಿದೆ. ಈ ಭಾಗದಲ್ಲಿ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಉಡುಪಿ- 25 ಲಕ್ಷ ರೂ. ಪ್ರತಿಭಾ ಪುರಸ್ಕಾರ -ಸನ್ಮಾನ -ಬಹುಮಾನ ವಿತರಣೆ..
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…