Featured

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :  ನಾಳೆಯಿಂದ ಕರಾವಳಿ ಸೇರಿ ರಾಜ್ಯದಲ್ಲಿ ಮತ್ತೆ  ಮಳೆಯ ಆರ್ಭಟ   – Vishwanews24

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :  ನಾಳೆಯಿಂದ ಕರಾವಳಿ ಸೇರಿ ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಮಳೆ ಮತ್ತೆ ಆರಂಭವಾಗಲಿದೆ. ಬೆಂಗಳೂರು  ಸೇರಿ 4 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಅಂಡಮಾನ್ ಸಮುದ್ರದಲ್ಲಿ 5.8 ಕಿಲೋ ಮೀಟರ್ ಎತ್ತರದಷ್ಟು ಮೇಲ್ಮೈ ಸುಳಿಗಾಳಿ ಎದ್ದಿದೆ. ಇದರ ಪ್ರಭಾವದಿಂದಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಎಚ್ಚರಿಕೆ ನೀಡಿದೆ. ಇಂದಿನಿಂದ ಡಿಸೆಂಬರ್ 8 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಯ ಕೆಲವೆಡೆಗಳಲ್ಲಿ ಭಾರೀ ಮಳೆ ಸಾಧ್ಯತೆ ಗೋಚರಿಸಿದ್ದು, ಡಿಸೆಂಬರ್ 8, 9 ಮತ್ತು 10 ರಂದು ಗುಡುಗು ಸಹಿತ ವ್ಯಾಪಕ ಮಳೆ ಬರುವ ಸಾಧ್ಯತೆ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: 

ರಾಜಧಾನಿ ಬೆಂಗಳೂರಿನಲ್ಲಿ  ವಾತಾವರಣ ಸಹಜ ಸ್ಥಿತಿಯಲ್ಲಿದ್ದು, ಡಿಸೆಂಬರ್ 8 ರವರೆಗೆ ಚಳಿ, ಸಾಧಾರಣ ಮಳೆಯಾಗಲಿದೆ. ಬೆಳಗಿನ ಜಾವ ದಟ್ಟ ಮಂಜು ಇರಲಿದೆ. ಡಿಸೆಂಬರ್ 7 ರಿಂದ 10 ರವರೆಗೆ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆ ಸುರಿಯುವ ಸಾಧ್ಯತೆ ಕಂಡುಬಂದಿದೆ. ಹಿಂಗಾರು ಮಳೆ ಮತ್ತೆ ಚುರುಕು ಪಡೆಯಲಿದ್ದು, ಡಿಸೆಂಬರ್ 8 ರಿಂದ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಅಬ್ಬರ ಶುರುವಾಗಲಿದೆ.

ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳಲಿದ್ದು, ಗುಡುಗು ಸಹಿತ ಸುಮಾರು 11 ಸೆಂಟಿಮೀಟರ್ ನಷ್ಟು ಮಳೆ ದಾಖಲಾಗಬಹುದು ಎಂದು ಎಚ್ಚರಿಕೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ಜೋರು ಮಳೆ ಆಗಲಿದೆ. ಮಳೆ ನಿಗದಿತ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

3 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

4 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

4 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

4 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

5 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

5 hours ago