ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಮಳೆ ಮತ್ತೆ ಆರಂಭವಾಗಲಿದೆ. ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಅಂಡಮಾನ್ ಸಮುದ್ರದಲ್ಲಿ 5.8 ಕಿಲೋ ಮೀಟರ್ ಎತ್ತರದಷ್ಟು ಮೇಲ್ಮೈ ಸುಳಿಗಾಳಿ ಎದ್ದಿದೆ. ಇದರ ಪ್ರಭಾವದಿಂದಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಎಚ್ಚರಿಕೆ ನೀಡಿದೆ. ಇಂದಿನಿಂದ ಡಿಸೆಂಬರ್ 8 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಯ ಕೆಲವೆಡೆಗಳಲ್ಲಿ ಭಾರೀ ಮಳೆ ಸಾಧ್ಯತೆ ಗೋಚರಿಸಿದ್ದು, ಡಿಸೆಂಬರ್ 8, 9 ಮತ್ತು 10 ರಂದು ಗುಡುಗು ಸಹಿತ ವ್ಯಾಪಕ ಮಳೆ ಬರುವ ಸಾಧ್ಯತೆ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ:
ರಾಜಧಾನಿ ಬೆಂಗಳೂರಿನಲ್ಲಿ ವಾತಾವರಣ ಸಹಜ ಸ್ಥಿತಿಯಲ್ಲಿದ್ದು, ಡಿಸೆಂಬರ್ 8 ರವರೆಗೆ ಚಳಿ, ಸಾಧಾರಣ ಮಳೆಯಾಗಲಿದೆ. ಬೆಳಗಿನ ಜಾವ ದಟ್ಟ ಮಂಜು ಇರಲಿದೆ. ಡಿಸೆಂಬರ್ 7 ರಿಂದ 10 ರವರೆಗೆ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆ ಸುರಿಯುವ ಸಾಧ್ಯತೆ ಕಂಡುಬಂದಿದೆ. ಹಿಂಗಾರು ಮಳೆ ಮತ್ತೆ ಚುರುಕು ಪಡೆಯಲಿದ್ದು, ಡಿಸೆಂಬರ್ 8 ರಿಂದ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಅಬ್ಬರ ಶುರುವಾಗಲಿದೆ.
ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳಲಿದ್ದು, ಗುಡುಗು ಸಹಿತ ಸುಮಾರು 11 ಸೆಂಟಿಮೀಟರ್ ನಷ್ಟು ಮಳೆ ದಾಖಲಾಗಬಹುದು ಎಂದು ಎಚ್ಚರಿಕೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ಜೋರು ಮಳೆ ಆಗಲಿದೆ. ಮಳೆ ನಿಗದಿತ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…