Mumbai: Vehicles ply on a waterlogged street during rain, at King's circle in Mumbai, Friday, July 3, 2020. (PTI Photo/Shashank Parade)(PTI03-07-2020_000101A)
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಚೆನ್ನೈ ಸೇರಿದಂತೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಜೆ ಘೋಷಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ಕಾಲ ತಮಿಳುನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನೂ ನೀಡಿದೆ. ಈ ಜಿಲ್ಲೆಗಳ ಐಟಿ ಕಂಪನಿಗಳ ಉದ್ಯೋಗಿಗಳಿಗೆ ಅಕ್ಟೋಬರ್ 15 ರಿಂದ 18ರವರೆಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವ ಸಲಹೆಯನ್ನು ನೀಡುವಂತೆ ಅಧಿಕಾರಿಗಳಿಗೆ ಸ್ಟಾಲಿನ್ ಸೂಚನೆ ನೀಡಿದ್ದಾರೆ.
ಮಳೆಯಾಗುತ್ತಿರುವ ಭಾಗಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಹಾಯವಾಣಿ ಆರಂಭಿಸಿದೆ. ಸಹಯಾಕ್ಕಾಗಿ 1070, ಜಿಲ್ಲಾ ಸಹಾಯವಾಣಿ 1077, ವಾಟ್ಸಪ್ ಸಂಖ್ಯೆ 9445869848ಕ್ಕೆ ಸಂಪರ್ಕಿಸಲು ಕೋರಲಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡಿನ 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅ.15-17ರವರೆಗೆ ತಮಿಳುನಾಡು ಕರಾವಳಿಯ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…