ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ತಮಿಳುನಾಡು ಮತ್ತು ಪುದುಚೆರಿಗಳಿಗೆ ನಿವಾರ್ ಚಂಡಮಾರುತ , ಹೈ ಅಲರ್ಟ್ -Vishwanews24

ಬಂಗಾಳಕೊಲ್ಲಿ ವಾಯುಭಾರ ಕುಸಿತ : ತಮಿಳುನಾಡು ಮತ್ತು ಪುದುಚೆರಿಗಳಿಗೆ ನಿವಾರ್ ಚಂಡಮಾರುತ , ಹೈ ಅಲರ್ಟ್ -Vishwanews24

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನಾಳೆ (ನ.25ರಂದು) ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ‍ಪ್ರದೇಶದಲ್ಲಿ ‘ನಿವಾರ್‘ ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಸಾಧ್ಯತೆ ಎಂದು ಮಂಗಳವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಪರಿಣಾಮ ತಮಿಳುನಾಡು ಮತ್ತು ಪುದುಚೆರಿ, ಕರೈಕಲ್‌ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

‘ಮುಂಜಾಗ್ರತಾ ಕ್ರಮವಾಗಿ ಚೆಂಬರಂಬಕ್ಕಂ ಸೇರಿದಂತೆ ಇಲ್ಲಿನ ಜಲಾಶಯಗಳ ಪ್ರದೇಶಗಳ ಮೇಲೆ ನಿರಂತರವಾಗಿ ನಿಗಾವಹಿಸಲಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ಚರ್ಚೆ: ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಭಾಗಗಳಿಗೆ ‘ನಿವಾರ್‘ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗ ಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮೋದಿಯವರು, ‘ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಾಧ್ಯವಾದಷ್ಟು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದೇನೆ. ಪ್ರವಾಹಪೀಡಿತ ಪ್ರದೇಶಗಳಲ್ಲಿರುವ ಜನರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ‘ ಎಂದು ಉಲ್ಲೇಖಿಸಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

3 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

3 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

4 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

4 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

4 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

5 hours ago