ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನಾಳೆ (ನ.25ರಂದು) ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಪ್ರದೇಶದಲ್ಲಿ ‘ನಿವಾರ್‘ ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಸಾಧ್ಯತೆ ಎಂದು ಮಂಗಳವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಪರಿಣಾಮ ತಮಿಳುನಾಡು ಮತ್ತು ಪುದುಚೆರಿ, ಕರೈಕಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
‘ಮುಂಜಾಗ್ರತಾ ಕ್ರಮವಾಗಿ ಚೆಂಬರಂಬಕ್ಕಂ ಸೇರಿದಂತೆ ಇಲ್ಲಿನ ಜಲಾಶಯಗಳ ಪ್ರದೇಶಗಳ ಮೇಲೆ ನಿರಂತರವಾಗಿ ನಿಗಾವಹಿಸಲಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಿ ಚರ್ಚೆ: ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಭಾಗಗಳಿಗೆ ‘ನಿವಾರ್‘ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗ ಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿಯವರು, ‘ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಾಧ್ಯವಾದಷ್ಟು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದೇನೆ. ಪ್ರವಾಹಪೀಡಿತ ಪ್ರದೇಶಗಳಲ್ಲಿರುವ ಜನರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ‘ ಎಂದು ಉಲ್ಲೇಖಿಸಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…