Featured

ಬಂಟಕಲ್ಲು: ಹೈಟೆನ್ಶನ್‌ ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ – ಪ್ರಯಾಣಿಕರು ಅಪಾಯದಿಂದ ಪಾರು – Vishwanews24

ಬಂಟಕಲ್ಲು: ಹೈಟೆನ್ಶನ್‌ ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ – ಪ್ರಯಾಣಿಕರು ಅಪಾಯದಿಂದ ಪಾರು

ಶಿರ್ವ: ಬಂಟಕಲ್ಲು- ಬಿ.ಸಿ.ರೋಡ್‌ ಮುಖ್ಯರಸ್ತೆಯ ಪಾಸ್ಕಲ್‌ ಕಾಂಪ್ಲೆಕ್ಸ್‌ ಮುಂಭಾಗದಲ್ಲಿ ಮಂಗಳವಾರ ಮುಂಜಾನೆ ಕಾರೊಂದು ಹೈಟೆನ್ಶನ್‌ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಂಬ ಮುರಿದು ಹಾನಿ ಸಂಭವಿಸಿದೆ.

ಕಟಪಾಡಿ ಕಡೆಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಕ್ವಾಲೀಸ್‌ ಕಾರು ಎಡ ಭಾಗದಿಂದ ಬಲ ಭಾಗಕ್ಕೆ ಚಲಿಸಿ ಹೈಟೆನ್ಶನ್‌ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ನಿಂತಿದೆ.

ಢಿಕ್ಕಿಯ ರಭಸಕ್ಕೆ ವಿದ್ಯುತ್‌ ಕಂಬದ ಬುಡ ಮತ್ತು ನಡುವೆ ಮುರಿದಿದ್ದು ಸುಮಾರು ಒಂದು ಮೀಟರ್‌ ಮುಂದಕ್ಕೆ ಹೋಗಿ ವಯರ್‌ನ ಆಧಾರದಲ್ಲಿ ವಾಲಿ ನಿಂತಿದೆ.

ಕಂಬದಲ್ಲಿದ್ದ ಗ್ರಾ.ಪಂ.ನ ವಿದ್ಯುತ್‌ ಮೀಟರ್‌ ಸಂಪೂರ್ಣ ಹಾನಿಗೊಂಡಿದ್ದು ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಮೆಸ್ಕಾಂ ಸಿಬಂದಿ ಮಂಜು ತತ್‌ಕ್ಷಣ ಧಾವಿಸಿ ವಿದ್ಯುತ್‌ ಕಡಿತಗೊಳಿಸಿದ್ದಾರೆ.

ಕಾರಿಗೂ ಹಾನಿ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುತ್ಯಾರು ಮೂಲದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಉದ್ಯಾವರದಲ್ಲಿ ನೇಮವೊಂದಕ್ಕೆ ತೆರಳಿ ವಾಪಾಸಾಗುತ್ತಿದ್ದ ಕಾರು ಚಾಲಕನ‌ ನಿದ್ದೆಯ ಮಂಪರಿನಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

12 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

12 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

13 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

13 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

14 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

14 hours ago