ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಐಎಸ್‍ಟಿಡಿ ಮಂಗಳೂರು ಉಡುಪಿ ಅಧ್ಯಾಯದ ಒಡಂಬಡಿಕೆ: vishwanews24

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಐಎಸ್‍ಟಿಡಿ ಮಂಗಳೂರು ಉಡುಪಿ ಅಧ್ಯಾಯದ ಒಡಂಬಡಿಕೆ

ಕಾಪು: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಇಂಡಿಯನ್ ಸೊಸೈಟಿ ಫಾರ್ ಟ್ರೈನಿಂಗ್ ಆ್ಯಂಡ್ ಡೆವಲಪ್‍ಮೆಂಟ್(ಐಎಸ್‍ಟಿಡಿ) ಮಂಗಳೂರು ಉಡುಪಿ ಘಟಕದ 04 ಜೂನ್ 2020ರಂದು ಒಡಂಬಡಿಕೆ ಮಾಡಿಕೊಂಡಿದೆ. ಈ ಒಪ್ಪಂದದ ಪ್ರಕಾರ ಕಾಲೇಜಿನ ಸಿಬ್ಬಂದಿಗಳು ಹಾಗೂ ಐಎಸ್‍ಟಿಡಿಯ ಸದಸ್ಯರು ವಿದ್ಯಾರ್ಥಿಗಳಿಗಾಗಿ ಹಲವಾರು ಸುಧಾರಣಾ ಕಾರ್ಯಕ್ರಮಗಳು, ಹೆಚ್‍ಆರ್‍ಡಿ, ಸಿಎಸ್‍ರ್ ಮತ್ತು ಒಡಿ ತರಬೇತಿ ಕಾರ್ಯಕ್ರಮಗಳನ್ನು ಒಟ್ಟಾಗಿ ನಡೆಸಿಕೊಡಲಾಗುವುದು ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಐಎಸ್‍ಟಿಡಿ ಘಟಕಕ್ಕೆ ಬೇಕಾದ ಅಗತ್ಯ ಬೆಂಬಲವನ್ನು ಕಾಲೇಜು ನೀಡಲು ಒಪ್ಪಿಕೊಂಡಿದ್ದು, ಇಂತಹ ತರಬೇತಿ ಕಾರ್ಯಕ್ರಮಗಳನ್ನು ನಡೆಸಿಕೊಡಲು ಸರ್ಕಾರಿ ಸಂಸ್ಥೆಗಳು, ಕೈಗಾರಿಕೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಐಎಸ್‍ಟಿಡಿ ಒಟ್ಟುಗೂಡಿಸುತ್ತದೆ. ಅಂತಹ ಸಂಸ್ಥೆಗಳು, ವಿದ್ಯಾಲಯದ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳಿಗೆ ನೀಡುವ ತರಬೇತಿ ಕಾರ್ಯಕ್ರವiಗಳಲ್ಲಿ ತರಬೇತುದಾರರಾಗಿ ಹಾಗೂ ಸಂಘಟಕರಾಗಿ ಕಾರ್ಯನಿರ್ವಹಿಸುತ್ತದೆ.
ಒಡಂಬಡಿಕಾ ಪತ್ರಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ| ತಿರುಮಲೇಶ್ವರ ಭಟ್ ಮತ್ತು ಐಎಸ್‍ಟಿಡಿ ಮಂಗಳೂರು ಉಡುಪಿ ಘಟಕದ ಅಧ್ಯಕ್ಷರಾದ ಪ್ರೊ. ರಾಮಕೃಷ್ಣ ಚಡಗ ಅವರು ದಿನಾಂಕ 04 ಜೂನ್ 2020 ರಂದು ಸಹಿ ಹಾಕಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್, ಇತರ ವಿಭಾಗಗಳ ಮುಖ್ಯಸ್ಥರು ಹಾಗೂ ಕಾಲೇಜಿನ ಐಎಸ್‍ಟಿಡಿ ಘಟಕದ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

15 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

15 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

15 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

16 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

16 hours ago