ಕಾಪು: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಇಂಡಿಯನ್ ಸೊಸೈಟಿ ಫಾರ್ ಟ್ರೈನಿಂಗ್ ಆ್ಯಂಡ್ ಡೆವಲಪ್‍ಮೆಂಟ್(ಐಎಸ್‍ಟಿಡಿ) ಮಂಗಳೂರು ಉಡುಪಿ ಘಟಕದ 04 ಜೂನ್ 2020ರಂದು ಒಡಂಬಡಿಕೆ ಮಾಡಿಕೊಂಡಿದೆ. ಈ ಒಪ್ಪಂದದ ಪ್ರಕಾರ ಕಾಲೇಜಿನ ಸಿಬ್ಬಂದಿಗಳು ಹಾಗೂ ಐಎಸ್‍ಟಿಡಿಯ ಸದಸ್ಯರು ವಿದ್ಯಾರ್ಥಿಗಳಿಗಾಗಿ ಹಲವಾರು ಸುಧಾರಣಾ ಕಾರ್ಯಕ್ರಮಗಳು, ಹೆಚ್‍ಆರ್‍ಡಿ, ಸಿಎಸ್‍ರ್ ಮತ್ತು ಒಡಿ ತರಬೇತಿ ಕಾರ್ಯಕ್ರಮಗಳನ್ನು ಒಟ್ಟಾಗಿ ನಡೆಸಿಕೊಡಲಾಗುವುದು ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಐಎಸ್‍ಟಿಡಿ ಘಟಕಕ್ಕೆ ಬೇಕಾದ ಅಗತ್ಯ ಬೆಂಬಲವನ್ನು ಕಾಲೇಜು ನೀಡಲು ಒಪ್ಪಿಕೊಂಡಿದ್ದು, ಇಂತಹ ತರಬೇತಿ ಕಾರ್ಯಕ್ರಮಗಳನ್ನು ನಡೆಸಿಕೊಡಲು ಸರ್ಕಾರಿ ಸಂಸ್ಥೆಗಳು, ಕೈಗಾರಿಕೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಐಎಸ್‍ಟಿಡಿ ಒಟ್ಟುಗೂಡಿಸುತ್ತದೆ. ಅಂತಹ ಸಂಸ್ಥೆಗಳು, ವಿದ್ಯಾಲಯದ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳಿಗೆ ನೀಡುವ ತರಬೇತಿ ಕಾರ್ಯಕ್ರವiಗಳಲ್ಲಿ ತರಬೇತುದಾರರಾಗಿ ಹಾಗೂ ಸಂಘಟಕರಾಗಿ ಕಾರ್ಯನಿರ್ವಹಿಸುತ್ತದೆ.
ಒಡಂಬಡಿಕಾ ಪತ್ರಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ| ತಿರುಮಲೇಶ್ವರ ಭಟ್ ಮತ್ತು ಐಎಸ್‍ಟಿಡಿ ಮಂಗಳೂರು ಉಡುಪಿ ಘಟಕದ ಅಧ್ಯಕ್ಷರಾದ ಪ್ರೊ. ರಾಮಕೃಷ್ಣ ಚಡಗ ಅವರು ದಿನಾಂಕ 04 ಜೂನ್ 2020 ರಂದು ಸಹಿ ಹಾಕಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್, ಇತರ ವಿಭಾಗಗಳ ಮುಖ್ಯಸ್ಥರು ಹಾಗೂ ಕಾಲೇಜಿನ ಐಎಸ್‍ಟಿಡಿ ಘಟಕದ ಸದಸ್ಯರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…