ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿ0ಗ್ ವಿಭಾಗದ ವಿದ್ಯಾರ್ಥಿಗಳಾದ ಐಶ್ವರ್ಯ, ಕಿರಣ್, ಗುರುಕಿರಣ್, ಲಿಖಿತ್ ಎರ್ಮಾಳ್ ಇವರು ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ರಾಜಾ ಯತೀಶ್ ಯಾದವ್ ಇವರ ನೇತೃತ್ವದಲ್ಲಿ ಸೌರಶಕ್ತಿ ಚಾಲಿತ ಬೀಜ ಬಿತ್ತನೆ ಯಂತ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ.
ರೈತರು ಕೃಷಿ ಭೂಮಿಯಲ್ಲಿ ಬೀಜಗಳನ್ನು ಬಿತ್ತಲು ಸಾಂಪ್ರದಾಯಿಕ ವಿಧಾನಗಳನ್ನು ಬಳಸುತ್ತಿದ್ದಾರೆ. ಈ ಹಳೆಯ ವ್ಯವಸ್ಥೆಯಲ್ಲಿ ಕೈಯಿಂದ ಬೀಜ ಬಿತ್ತಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಹಾಗೂ ಕಾರ್ಮಿಕರ ಕೊರತೆಯಿರುವುದರಿಂದ ಈ ಪದ್ಧತಿಯು ಕ್ರಮೇಣ ಅಪ್ರಸ್ತುತ ಎನಿಸುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ವಿದ್ಯಾರ್ಥಿಗಳು ಸ್ವಯಂಚಾಲಿತ ಬಿತ್ತನ ಬೀಜವನ್ನು ಅಭಿವೃದ್ದಿ ಪಡಿಸಿದ್ದಾರೆ.
ಈ ಯಂತ್ರವು ಸೌರಶಕ್ತಿ ಚಾಲಿತ ಬ್ಯಾಟರಿಯನ್ನು ಉಪಯೋಗಿಸುವುದರಿಂದ ಪರಿಸರ ಸ್ನೇಹಿಯಾಗಿದೆ. ಈ ಯಂತ್ರದಲ್ಲಿ ಬೀಜವನ್ನು ಮಣ್ಣಿನಲ್ಲಿ ಹಾಕುವ ಮೊದಲು ಸುಮಾರು ೪ ಸೆಂ. ಮೀ ಆಳಕ್ಕೆ ಮಣ್ಣನ್ನು ಅಗೆಯಲು ಅವಕಾಶವಿದೆ. ಬಿತ್ತನೆಯೊಂದಿಗೆ ನೀರು ಮತ್ತು ದ್ರವ ಗೊಬ್ಬರಗಳನ್ನು ಸಿಂಪಡಿಸುವುದು ಈ ಯಂತ್ರದ ಹೆಚ್ಚುವರಿ ವೈಶಿಷ್ಟö್ಯವಾಗಿದೆ. ಈ ಯಂತ್ರವು ನೆಲಗಡಲೆ ಬೆಳೆಯುವ ರೈತರಿಗೆ ಹೆಚ್ಚು ಸೂಕ್ತವಾಗಿದೆ.
ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಮತ್ತು ಉಪ ಪ್ರಾಶುಪಾಲರಾದ ಡಾ. ಗಣೇಶ್ ಐತಾಳ್ ಅಭಿನಂದಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…