ದಕ್ಷಿಣಕನ್ನಡ: ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಅಂಗಡಿಯೊಂದರ ಶಟರ್ನಲ್ಲಿ ಯಾರೋ ಕಿಡಿಗೇಡಿಗಳು ನೇಮ್ ಜಿಹಾದ್ ಎಂಬ ಬರಹವನ್ನು ಹಾಕಿದ್ದಾರೆ. ಇದರಿಂದ ಸ್ಥಳೀಯರಿಗೆ ಆತಂಕಕ್ಕೆ ಶುರುವಾಗಿದೆ.
ಕೆಲ ದಿನಗಳ ಹಿಂದೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನೈನಾಡು ಎಂಬಲ್ಲಿ ಇದೇ ರೀತಿ ಆತಂಕಕಾರಿ ಬರವಣಿಗೆಯೊಂದು ಕಂಡು ಬಂದಿತ್ತು. ಬಳಿಕ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಆದರೆ, ಇದುವರೆಗೂ ಖದೀಮರ ಕುರಿತು ಯಾವೊಂದು ಸುಳಿವು ಸಿಕ್ಕಿಲ್ಲ.ಈ ಬೆನ್ನಲ್ಲೇ ಬಂಟ್ವಾಳ ತಾಲೂಕಿನ ವಿಟ್ಲದ ಪೇಟೆಯ ದೀಪಕ್ ವಾಚ್ ವರ್ಕ್ಸ್ನ ಶಟರ್ ಮೇಲೆ ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ನೇಮ್ ಜಿಹಾದ್ ಎಂದು ಬರೆದಿದ್ದು, ಮುಂಜಾನೆ ಅಂಗಡಿ ಮಾಲೀಕ ಬಾಗಿಲು ತೆರೆಯಲು ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಅಬ್ದುಲ್ ಎಂಬುವರಿಗೆ ಸೇರಿದ ಅಂಗಡಿ ಇದಾಗಿದ್ದು, ಈ ಕುರಿತು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಯಾರೋ ಇಬ್ಬರು ಬರುತ್ತಿರುವುದು ಕಂಡುಬಂದಿದೆ ಎನ್ನಲಾಗ್ತಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…