ಬಂಟ್ವಾಳ : ವಿಶ್ವಕಪ್ ಕಬ್ಬಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಅಂತರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ ಉದಯ ಚೌಟ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆಯಲ್ಲಿ ಅವರು ವಾಸವಿದ್ದರು.ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದು, 2004ರಲ್ಲಿ ಭಾರತ-ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ಚಿನ್ನದ ಪದಕವನ್ನು ಪಡೆದಿದ್ದರು. 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು.ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…