ಬಂಟ್ವಾಳ :ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಎಂಬಲ್ಲಿ ನಡೆದಿದೆ.
ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಮತ್ತು ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ (23) ಕಾಣೆಯಾದವರು.
ದೇರಳಕಟ್ಟೆಯ ನಡುಪದವು ಪಿ.ಎ.ಕಾಲೇಜಿನಲ್ಲಿ ಫಾರ್ಮಸಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಒಂದು ವಾರಗಳ ಕಾಲ ರಜೆಯಿದ್ದ ಕಾರಣ ಈಕೆ ಮನೆಯಲ್ಲಿದ್ದಳು.
ನ.23 ರಾತ್ರಿ ಮನೆಯವರ ಜೊತೆ ಮಲಗಿದ್ದ ಈಕೆ ಬೆಳಿಗ್ಗೆ ಎದ್ದು ನೋಡುವಾಗ ಅವಳು ಮಲಗಿದ್ದ ಕೋಣೆಯಲ್ಲಿರದೆ ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಿನಾನ್ ಕೆಲ ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದ ಇತ್ತೀಚೆಗೆ ಮರಳಿ ಊರಿಗೆ ಬಂದಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಈತ ಕೂಡ ನ.22. ರಂದು ಮನೆಯವರ ಜೊತೆಗೆ ಮಲಗಿದ್ದು, ಮರು ದಿನ ಅಂದರೆ ನ.23.ರಂದು ಬೆಳಿಗ್ಗೆ ಎದ್ದು ನೋಡುವಾಗ ಮನೆಯಲ್ಲಿರದೆ ಕಾಣೆಯಾಗಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.
ಪ್ರೇಮ ಪ್ರಕರಣದ ಶಂಕೆ
ಅಕ್ಕಪಕ್ಕದ ಮನೆಯ ಹುಡುಗಿ ಮತ್ತು ಹುಡುಗನ ನಡುವೆ ಪ್ರೀತಿ ಪ್ರೇಮದ ಶಂಕೆಯನ್ನು ವ್ಯಕ್ತಪಡಿಸಲಾಗಿದೆ.ಇವರಿಬ್ಬರು ಸಲುಗೆಯಿಂದ ಇದ್ದುದಲ್ಲದೆ, ಪರಿಚಯಸ್ಥರಾಗಿದ್ದಾರೆ. ಹಾಗಾಗಿ ಇವರಿಬ್ಬರು ಒಂದೇ ದಿನ ಕಾಣೆಯಾಗಿರುವುದರ ಹಿಂದೆ ಸಂದೇಹ ವ್ಯಕ್ತವಾಗಿದೆ.ಎರಡು ಮನೆಯವರ ಪೋಷಕರು ಕಾಣೆಯಾದ ಇಬ್ಬರನ್ನು ಹುಡುಕಿಕೊಡುವಂತೆ ಠಾಣೆಗೆ ದೂರು ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…