ಬಂಟ್ವಾಳ: ಬಂಟ್ವಾಳದ ತುಂಬೆಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತುಂಬೆ ರಾಮ ನಿವಾಸ ನಿವಾಸಿಯಾಗಿರುವ ವೆಂಕಟೇಶ ಕಾರಂತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿಯಾಗಿದ್ದಾನೆ. ಈತ ತುಂಬೆಯಲ್ಲಿ ಪುರೋಹಿತನಾಗಿ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇನ್ನು ಬಾಲಕಿಗೆ ವೆಂಕಟೇಶ ಕಾರಂತ ಅವರು ಮಲತಂದೆ ಸಂಬಂಧ ಎಂಬ ಮಾಹಿತಿ ಲಭ್ಯವಾಗಿದೆ. ಬಾಲಕಿಯ ತಂದೆ ಅಪಘಾತದಲ್ಲಿ ಮರಣಹೊಂದಿದ ನಂತರ ಆಕೆಯ ತಾಯಿ ಎರಡನೇ ಮದುವೆಯಾಗಿದ್ದು, ಬಾಲಕಿಯೂ ಕೂಡ ಇವರ ಜೊತೆಯಲ್ಲಿ ವಾಸವಾಗಿದ್ದಳು ಎಂದು ತಿಳಿದು ಬಂದಿದೆ.
ಬಾಲಕಿಯ ಮಲತಂದೆಯನ್ನು ಪೋಲಿಸರು ವಶಕ್ಕೆ ಪಡೆದುಕೊಂಡು ಜೈಲಿಗೆ ಕಳುಹಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…