ಬಂಟ್ವಾಳ,:ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿಮಾ ದಲ್ಲಿ ರೂಂ ಮಾಡಿದ್ದ,ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿಗಳು ಕರೆದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಪೋಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಈತನ ಮೃತದೇಹದ ಪತ್ತೆಯಾಗಿದೆ.
ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ.
ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು,ಪ್ರೇಮ ವೈಫಲ್ಯದ ಕಾರಣವನ್ನು ಎದುರಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.
ಹಾಗಾಗಿ ಮಾನಸಿಕವಾಗಿ ನೊಂದಿದ್ದ ಕಾರಣವೇ ಈತ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿರಬಹುದು ಎಂದು ಪೋಲೀಸರು ಶಂಕಿಸಿದ್ದು,ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಬೇಟಿ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…