ಬಂಟ್ವಾಳ : ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗದಲ್ಲಿದ್ದ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆಗೆ ಸೋಮವಾರ ಮುಂಜಾನೆ ಸುಮಾರು 1 ಗಂಟೆಯ ವೇಳೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ.
ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲೇ ವ್ಯಾಪಿಸಿದ ಪರಿಣಾಮ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಸ್ಥಳೀಯ ನಿವಾಸಿಗಳು ಸಮಯಪ್ರಜ್ಞೆ ಮೆರೆದು ಕೊಟ್ಟಿಗೆಯೊಳಗಿದ್ದ ದನಗಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದರಿಂದ ಯಾವುದೇ ಜಾನುವಾರುಗಳಿಗೆ ಅಪಾಯ ಸಂಭವಿಸಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಇದರಿಂದ ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲು ಸಾಧ್ಯವಾಯಿತು. ಅಗ್ನಿ ಅವಘಡದಲ್ಲಿ ಸುಮಾರು 4 ಲಕ್ಷ ರೂ.ಗೂ ಅಧಿಕ ನಷ್ಟ ಸಂಭವಿಸಿರುವುದಾಗಿ ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮ ಕರಣಿಕರ ಸಹಾಯಕರು ಹಾಗೂ ಮಾಜಿ ಪಂಚಾಯತ್ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…