ಬಂಟ್ವಾಳ : ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ.
ಸೋಮವಾರ ಮುಂಜಾನೆ 5 ರ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆ ಗೈದಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಅಲ್ಲಿ ಸೇರಿದವರು ಮೃತನನ್ನು ಗುರುತಿಸಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…