ಬಂಟ್ವಾಳ : ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇದೇ ಡಿ.10ರ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ರವಾಸ ಕೈಗೊಂಡಿದ್ದಾರೆ.
ಸಂಜೆ 6.05ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು 6.15ಕ್ಕೆ ಅಲ್ಲಿಂದ ಹೊರಟು 6.50 ಕ್ಕೆ ಬಂಟ್ವಾಳ ತಾಲೂಕಿನ ಕಲ್ಲಡ್ಕಕ್ಕೆ ಆಗಮಿಸುವರು. ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
ರಾತ್ರಿ 8.30 ಕ್ಕೆ ಕಲ್ಲಡ್ಕದಿಂದ ರಸ್ತೆ ಮಾರ್ಗವಾಗಿ ಹೊರಟು 9.05ಕ್ಕೆ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 9.15ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…