Featured

ಬಂಟ್ವಾಳ: ಇದು ನನ್ನ ಕೊನೆಯ ಚುನಾವಣಾ ಸ್ಪರ್ಧೆ : ರಮಾನಾಥ ರೈ – Vishwanews24

ಬಂಟ್ವಾಳ: ಇದು ನನ್ನ ಕೊನೆಯ ಚುನಾವಣಾ ಸ್ಪರ್ಧೆ : ರಮಾನಾಥ ರೈ

ಬಂಟ್ವಾಳ:  ಕರ್ನಾಟಕ ವಿಧಾನಸಭೆಗೆ 2023 ರಲ್ಲಿ ನಡೆಯುವ ಚುನಾವಣೆಗೆ ನನ್ನ ಕೊನೆಯ ಸ್ಪರ್ಧೆ,ಜನತೆ ಆಶೀರ್ವಾದ ಮಾಡಿದರೆ ಮುಂದಿನ ಅವಧಿಯಲ್ಲಿ ಅದ್ಬುತವಾದ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸುತ್ತೇನೆ.ನಾನು ಹಿಂದೆ ಏನು ಹೇಳಿದ್ದೆನೆ ಅದನ್ನು ಮಾಡಿದ್ದೇನೆ, ಆಗ ಮಾಡಿದನ್ನು ಈಗಲು ಹೇಳುತ್ತೇನೆ ಇದು ನನ್ನ ಜಾಯಮಾನವಾಗಿದೆ ಎಂದು ಮಾಜಿ ಸಚಿವ,ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದರು.

ಬುಧವಾರ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಪಪ್ರಚಾರದಿಂದಾಗಿ ಕಳೆದ ಚುನಾವಣೆಯಲ್ಲಿ ನನಗೆ ಕಳೆದ ಸೋಲಾಗಿರುವುದು ನಿಜ ,ಆದರೆ ಜನರಿಗೆ ಈಗ ಮನವರಿಕೆಯಾಗಿದ್ದು, ಜನರು‌ ಆಶೀರ್ವಾದ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು.\

ಆರು ಬಾರಿ ಬಂಟ್ವಾಳದ ಜನತೆ ನನ್ನನ್ನು ಶಾಸಕನಾಗಿ ಮಾಡಿದ್ದು,ಇಲ್ಲಿಯ ಜನರ ಋಣ ನನ್ನ ಮೇಲಿದೆ.ಇದನ್ನು ಬದುಕಿನ ಕೊನೆಯವರೆಗೂ ಮರೆಯಲು ಸಾಧ್ಯವಿಲ್ಲ,ರಾಜಕೀಯ ಜೀವನದ ಇದೇ ನನ್ನ ಕೊನೆಯ ಚುನಾವಣಾ ಸ್ಪರ್ಧೆಯಾಗಿದೆ ಎಂದ ಅವರು ಒಬ್ಬ ಪ್ರಾಮಾಣಿಕ ರಾಜಕಾರಣಿಗೆ ರಾಜಕೀಯ ಮಾಡುವುದು ಸುಲಭದ ಮಾತಲ್ಲ, ಭೂಮಿ ಮಾರಿ ರಾಜಕೀಯ ಮಾಡಲು ನನ್ನಿಂದ ಸಾಧ್ಯವಿಲ್ಲ, ನಾನು ಎಂದು ಕೂಡ ಸುಳ್ಳು ಹೇಳುವುದಿಲ್ಲ ಎಂದು ಅವರು ತಿಳಿಸಿದರು.

ನಿರುದ್ಯೋಗ,ಬೆಲೆಏರಿಕೆ:
ನಿರುದ್ಯೋಗ ಮತ್ತು ಬೆಲೆ ಏರಿಕೆ ವಿಚಾರವನ್ನು ಮುಂದಿಟ್ಟು ಈ ಭಾರಿಯ ಚುನಾವಣೆ ನಡೆಯಲಿದೆ. ಸಿದ್ದರಾಮಯ್ಯರು ಮುಖ್ಯಮಂತ್ರಿಯಾಗಿದ್ದಾಗ ಜನಪರವಾದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯನ್ನು ಈಡೇರಿಸಿದೆ. ಇದೀಗ ಪಕ್ಷ ಘೋಷಿಸಿರುವ ಮೂರು ಗ್ಯಾರಂಟಿಯನ್ನು ಕೂಡ ಪೂರೈಸುವ ಶಕ್ತಿ ಕಾಂಗ್ರೆಸ್ ಗಿದೆ ಎಂದು ರಮಾನಾಥ ರೈ ತಿಳಿಸಿದರು.

ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ:
ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಇಡೀ ದ.ಕ.ಜಿಲ್ಲೆಯಲ್ಲಿ ಅತೀ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಬಂಟ್ವಾಳ ಕ್ಷೇತ್ರದಲ್ಲಿ ಮಾಡಿದ್ದೇನೆ.ಸರಿಸುಮಾರು 5 ಸಾವಿರ ಕೋಟಿಗೂ ಮಿಕ್ಕಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿದ್ದೆನೆ.ಆಗ ಉಸ್ತುವಾರಿ ಮಂತ್ರಿಯಾಗಿ ಎಲ್ಲಾ ಅಭಿವೃದ್ಧಿ ಕೆಲಸವನ್ನು ಬಂಟ್ವಾಳದಲ್ಲಿ ಮಾಡಿದ್ದಾರೆ ಎಂಬ ಸ್ವಪಕ್ಷದ ಶಾಸಕರ ಆರೋಪಕ್ಕು ಆಗ ನಾನು ಗುರಿಯಾಗಿದ್ದೆ ಎಂದು‌ ನೆನಪಿಸಿದರು.
ಯಾರೋ ಮಾಡಿದ ಕಾಮಗಾರಿಯನ್ನು ನಾನು ಮಾಡಿದ್ದೇನೆ ಎಂದು ಹೇಳುವಷ್ಟು ಸಣ್ಣ ವ್ಯಕ್ತಿಯಲ್ಲ. ಕಾರಿಂಜ, ಪೊಳಲಿ, ನಿಟಿಲೇಶ್ವರ ದೇವಸ್ಥಾನದ ಜೊತೆಗೆ ಎಲ್ಲಾ ಸಮಾಜದ ಧಾರ್ಮಿಕ ಕೇಂದ್ರ ಗಳ ಅಭಿವೃದ್ಧಿಗೂ ಪ್ರಾಮಾಣಿಕ ಪ್ರಯತ್ನ ಮಾಡಿದ್ದೆನೆ ಎಂದರು.

ಅನಂತಾಡಿಯಲ್ಲಿ ಇಷ್ಟು ವರ್ಷ ಕಾಂಗ್ರೇಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ ಉದಾಹರಣೆ ಇರಲಿಲ್ಲ.ಈಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಗೆಲುವು ಸಾಧಿಸಿರುವುದು ಸಂತಸ ತಂದಿದೆ ಎಂದರು.

ರಥಯಾತ್ರೆ
ಕಾಂಗ್ರೆಸ್ ಪಕ್ಷದ ವತಿಯಿಂದ ಮಾ.10 ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದ ವಠಾರದಿಂದ ರಥಯಾತ್ರೆ ಆರಂಭವಾಗಲಿದ್ದು, ಪ್ರತಿದಿನ ಮೂರು ಗ್ರಾಮ ಪಂಚಾಯತನ್ನು ಕ್ರಮಿಸಲಿದೆ. ಈ ಯಾತ್ರೆ 14 ದಿನಗಳ ಕಾಲ ಬಂಟ್ವಾಳ ಕ್ಷೇತ್ರದಲ್ಲಿ ಸಂಚರಿಸಲಿದೆ.ಈ ಸಂದರ್ಭ ಹಿಂದೆ ಆಗಿರುವ ಅಭಿವೃದ್ಧಿ ಕೆಲಸಗಳ ಜತೆಗೆ ಸರಕಾರದ ವೈಫಲ್ಯವನ್ನು ಜನರಿಗೆ ತಿಳಿಸುವ ಕಾರ್ಯ ನಡೆಯಲಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ ಜೈನ್, ಮಾಯಿಲಪ್ಪ ಸಾಲಿಯಾನ್, ಅಬ್ಬಾಸ್ ಆಲಿ, ವೆಂಕಪ್ಪ ಪೂಜಾರಿ, ರಮೇಶ್ ನಾಯ್ಕ್ ರಾಯಿ, ಸುರೇಶ್ ಜೋರಾ,ಸುಭಾಶ್ಚಂದ್ರ ಶೆಟ್ಟಿ, ಜಗದೀಶ್ ಕೊಯಿಲ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago