Featured

ಬಂಟ್ವಾಳ: ಉಗ್ರರಿಗೆ ಹಣಕಾಸಿನ ನೆರವು: ದ.ಕ ಹಲವೆಡೆ NIA ದಾಳಿ – Vishwanews24

ಬಂಟ್ವಾಳ: ಉಗ್ರರಿಗೆ ಹಣಕಾಸಿನ ನೆರವು: ದ.ಕ ಹಲವೆಡೆ ಎನ್ ಐ ಎ ದಾಳಿ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಂಬ್ ಇರಿಸಲು ಯತ್ನಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್ ಐ ಎ ಭಾನುವರ ಸಂಜೆ ಬಂಟ್ವಾಳ, ಪುತ್ತೂರಿನಲ್ಲಿ ಹಲವು ಮನೆಗಳಿಗೆ ದಾಳಿ ನಡೆಸಿದೆ.

ಪಾಟ್ನಾ ದ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮ‌ೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿ ತನಿಖೆ ನಡೆಸುತ್ತಿದೆ.

ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಅರೋಪಿಗಳು ಪಾಟ್ನಾ ದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕ ರ ಜೊತೆ ಸಂಪರ್ಕ ಹೊಂದಿ ಹಣಕಾಸಿನ ನೆರವು ಒದಗಿಸಿದ್ದಾರೆ ಎಂಬ ಆರೋಪದಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಈ ಕೃತ್ಯಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ಹಣದ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಇವರ ಮೇಲಿದೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಎನ್.ಐ.ಎ ತಂಡ ಇಂದು ಸಂಜೆ ವೇಳೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿದೆ.

Vishwa News 24

Recent Posts

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

1 hour ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

1 hour ago

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…

3 hours ago

ಕಾಪು : ಕಾರು-ಲಾರಿ ಮಧ್ಯೆ ಭೀಕರ ಅಪಘಾತ  – ಓರ್ವ ಸಾವು, ಇಬ್ಬರು ಗಂಭೀರ – vishwanews24

ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ  ಅಪಘಾತ  - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…

3 hours ago

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

23 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

23 hours ago