ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ನಿನ್ನೆ (ಮಾ.14) ರಾತ್ರಿ ವಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ರಕ್ಷಿತ್ ಅವರನ್ನ ಮಂಗಳೂರು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅದರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಬಗ್ಗೆ ಪೋಲೀಸ್ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:
ಛಾಯಾಗ್ರಾಹಕ ಸಂಘದ ಬಂಟ್ವಾಳ ವಲಯದ ನಕ್ರೀಯ ಸದಸ್ಯರಾಗಿದ್ದ ರಕ್ಷಿತ್ ಅವರು ಅತ್ಯುತ್ತಮ ವಿಡಿಯೋಗ್ರಾಫರ್ ರಾಗಿದ್ದರು. ರಕ್ಷಿತ್ ಅವರ ಮಗಳ 10 ನೇ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮವನ್ನು ನಾಳೆ (ಮಾ.15) ಮನೆಯಲ್ಲಿ ನಡೆಸಲು ತಯಾರಿಗಳು ಮಾಡಲಾಗಿತ್ತು. ಮಗಳ ಹುಟ್ಟು ಹಬ್ಬದ ಸಂಭ್ರಮದ ಮನೆಯೀಗ ತಂದೆಯ ಸಾವಿನಿಂದ ಮೌನವಾಗಿ ರೋಧಿಸುತ್ತಿದೆ.
ರಕ್ಷಿತ್ ಸಹೋದರ ರಂಜಿತ್ ಅವರು ಕೂಡ ಸುಮಾರು ವರ್ಷಗಳ ಹಿಂದೆ ಅವಘಾತದಲ್ಲಿ ಗಾಯಗೊಂಡು ಮಲಗಿದ ಸ್ಥಿತಿಯಲ್ಲಿ ಮನೆಯಲ್ಲಿದ್ದಾರೆ. ಅತ್ಯಂತ ಬಡ ಕುಟುಂಬ ಇದೀಗ ಮನೆಯ ಆಧಾರಸ್ತಂಭವಿಲ್ಲದೆ ಕಂಗಲಾಗಿದೆ.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…