ಬಂಟ್ವಾಳ : ಎಸ್ ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಮನೆ ಮೇಲೆ ಎನ್ಐಎ ದಾಳಿ – Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ : ಎಸ್ ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಮನೆ ಮೇಲೆ ಎನ್ಐಎ ದಾಳಿ

ಬಂಟ್ವಾಳ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುನ ಎನ್ಎಐ ಅಧಿಕಾರಿಗಳು ಇಂದು ಎಸ್ ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ಈಗಾಗಲೇ ಜಿಲ್ಲೆಯ ಹಲವು ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ಳಂ ಬೆಳಗ್ಗೆ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಅಧಿಕಾರಿಗಳು ದಾಳಿ ನಡೆಸಿದ ಸುದ್ದಿ ತಿಳಿದು ಮನೆಯ ಎದುರು ಎಸ್.ಡಿ.ಪಿ.ಐ. ಪಕ್ಷದ ಕಾರ್ಯಕರ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪಡುಬಿದ್ರಿ: ಪ್ರೀತಿಸಿ ಮದುವೆಯಾಗಿ ಪತ್ನಿಯ ಹೆಸರಿನಲ್ಲಿ ಸಾಲ ಮಾಡಿ ಆತ್ಮಹತ್ಯೆ ನಾಟಕವಾಡಿ ಪತ್ನಿಯ ಕೊಲೆ – Vishwanews24

Leave a Reply