ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಸೋಮವಾರ ಬೆಳಗ್ಗೆ(ಏ.8 ರಂದು) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.
ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದಿದ್ದು, ಯಾರಿಗೂ ಗಾಯಗಳಾಗಿಲ್ಲ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಘಟನೆ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಬ್ಲಾಕ್ ಆಗಿತ್ತು ಎನ್ನಲಾಗಿದೆ.
ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಅದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ವೇಳೆ ಕಾರು ಬ್ರೇಕ್ ಹಾಕಿದರೂ ನಿಲ್ಲದೇ ಇದ್ದು, ಬಳಿಕ ಚಾಲಕನ ಸಮಯ ಪ್ರಜ್ಞೆಯಿಂದ ಕಾರು ನಿಂತಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದು, ಯಾರಿಗೂ ಯಾವುದೇ ಹಾನಿಯಾಗಿಲ್ಲ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…