ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.
ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು.
ಈ ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಸೂರಂಡೆ ನಿವಾಸಿಗಳಾದ ನಾರಾಯಣ ಪೂಜಾರಿ ಮತ್ತು ಶ್ರೀಮತಿ ದಂಪತಿಗಳ ಪುತ್ರಿಯಾದ ಪ್ರತಿಭಾ ಅವರು ವಾಮದಪದವು ಸಮೀಪದ ಕುಡಂಬೆಟ್ಟು ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರನ್ನು ವಿವಾಹವಾಗಿದ್ದು, ಸಂಸಾರ ಸಹಿತ ಕಳೆದ ಕೆಲವು ವರ್ಷಗಳಿಂದ ದೋಹಾ ಕತಾರಿನಲ್ಲಿ ನೆಲೆಯಾಗಿದ್ದಾರೆ.
ಪ್ರತಿಭಾ ಎನ್.ದರ್ಖಾಸು ಅವರು ಕತಾರಿನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ಕೊರೊನಾ ಸಹಿತ ಇತರ ಸಂದರ್ಭದಲ್ಲಿನ ಇವರ ವಿಶೇಷ ಸೇವೆಯನ್ನು ಗುರುತಿಸಿ ಈಗಾಗಲೇ ಗೌರವಿಸಲಾಗಿತ್ತು.ಇದೀಗ ಇವರು ಆರೋಗ್ಯ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಯನ್ನು ಪರಿಗಣಿಸಿ ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಆಯ್ಕೆ ಮಾಡಲಾಗಿದೆ.
ಈ ಅಪೂರ್ವ ಸೇವೆಗೆ ಆಯ್ಕೆಯಾದ ಪ್ರತಿಭಾ ಎನ್.ದರ್ಖಾಸು ಅವರಿಗೆ ತುಳುನಾಡಿನಾದ್ಯಾಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…