Featured

ಬಂಟ್ವಾಳ: ಕಾಂಗ್ರೆಸ್ ಸಮಾವೇಶದಲ್ಲಿ “ವಂದೇ ಮಾತರಂ” ದೇಶ ಭಕ್ತಿಗೀತೆಗೆ ಅವಮಾನ

ಬಂಟ್ವಾಳ: ಬಂಟ್ವಾಳದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಯಲ್ಲಿ ವಂದೇ ಮಾತರಂ ದೇಶ ಭಕ್ತಿಗೀತೆಯನ್ನು ಹಾಡಲು ಆರಂಭಿಸಿ, ಅರ್ಧದಲ್ಲೇ ಮೊಟಕುಗೊಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೋಗುವ ಹಿನ್ನಲೆ, ತರಾತುರಿಯಲ್ಲಿ ವಂದೇ ಮಾತರಂ ದೇಶ ಭಕ್ತಿಗೀತೆಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ವಂದೇ ಮಾತರಂ ಹಾಡುತ್ತಿದ್ದ ವೇಳೆ ರಾಹುಲ್ ಗಾಂಧಿ, ಬೇಗ ಹಾಡಿ ಮುಗಿಸಿ, ಒಂದೇ ಲೈನ್ ಸಾಕು ಎಂದು ಸೂಚನೆ ನೀಡಿದ್ದು ಹಾಡನ್ನು ನಿಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಸಮಾವೇಶ ಆರಂಭವಾಗುವಾಗ ಸ್ವಲ್ಪತಡವಾಗಿತ್ತು. ಹೀಗಾಗಿ ಕಾಂಗ್ರೆಸ್ ನಾಯಕರು ಬೇಗ ಕಾರ್ಯಕ್ರಮ ಮುಗಿಸುವ ತರಾತುರಿಯಲ್ಲಿದ್ದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಇದೀಗ ವಂದೇ ಮಾತರಂ ಗೀತೆ ಎಂದು ಕಾರ್ಯಕ್ರಮ ನಿರೂಪಕರು ಘೋಷಿಸಿದರು. ಈ ವೇಳೆ ಸಮಯ ಕಳೆಯುತ್ತಿದೆ ವಂದೇ ಮಾತರಂ ಗೀತೆ ಬೇಕಾ..? ಎಂದು ರಾಹುಲ್ ಗಾಂಧಿ ವಾಚ್ ತೋರಿಸಿ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಪ್ರಶ್ನಿಸಿದ್ದಾರೆ. ಆಗ ವೇಣುಗೋಪಾಲ್ ಒಂದೆರಡು ಸಾಲು ಹಾಡಿ ಎಂದು ಹಾಡುವವರಿಗೆ ಸೂಚನೆ ನೀಡಿದ್ದಾರೆ.  ವೇಣುಗೋಪಾಲ್ ಸೂಚನೆ ಮೇರೆಗೆ ವಂದೇ ಮಾತರಂ ಹಾಡನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ. ದೇಶ ಭಕ್ತಿಗೀತೆಗೆ ಅವಮಾನಿಸಿರುವ ಈ ಘಟನೆಗೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಹರೀಶ್ ಕುಮಾರ್ ಬಹಿರಂಗ ಸಭೆಯಲ್ಲಿ ವಂದೇ ಮಾತರಂ ದೇಶ ಭಕ್ತಿಗೀತೆಗೆ ಅವಮಾನಿಸಿಲ್ಲ. ಹಾಡನ್ನು ಮೂರು ನಿಮಿಷ ಹಾಡಲಾಗಿದೆ. ವಂದೇ ಮಾತರಂ ಗೀತೆಗೆ ಅಗೌರವ ತೋರಿಸಿಲ್ಲ ಎಂದು ತಿಳಿಸಿದ್ದಾರೆ.

Vishwa News 24

Recent Posts

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…

10 hours ago

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

2 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

4 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

4 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

4 days ago

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

4 days ago