ಬಂಟ್ವಾಳ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.
ಬಂಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಮೃತಪಟ್ಟವರು. ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಸದ್ಯ ದೇರಳಕಟ್ಟೆ ಫ್ಲಾಟ್ ನಲ್ಲಿ ನೆಲೆಸಿರುವ ಸಿದ್ದೀಖ್ ಶುಕ್ರವಾರದ ಜುಮಾ ನಮಾಝ್ ಅನ್ನು ಕರೋಪಾಡಿ ಮಸೀದಿಯಲ್ಲಿ ನಡೆಸಿದ್ದರು. ಅಲ್ಲಿಂದ ವಾಪಸ್ಸು ದೇರಳಕಟ್ಟೆಗೆ ಬರುವ ದಾರಿ ಮಧ್ಯೆ ಮುಡಿಪು ಜಂಕ್ಷನ್‌ನಲ್ಲಿ ಇಳಿದು, ಎಟಿಎಂ ಹಣ ಡ್ರಾ ಮಾಡಿದ್ದಾರೆ. ಅಲ್ಲಿಂದ ವಾಪಸ್ಸು ರಸ್ತೆ ದಾಟಿ ಬಸ್ಸನ್ನೇರಲು ಹೊರಟಾಗ ಮಂಗಳೂರು ಕಡೆಗೆ ಚಲಿಸುತ್ತಿದ್ದ ಸೂರಜ್ ನಾಥ್ ಎಂಬವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ತಲೆ ಭಾಗಕ್ಕೆ ಗಂಭೀರ ಗಾಯಗೊಂಡ ಸಿದ್ದೀಖ್ ಅವರನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.
ಸಿದ್ದೀಖ್ ಮುಂದಿನ ವಾರದಲ್ಲಿ ಮತ್ತೆ ಉದ್ಯೋಗ ಮಿತ್ತ ಗಲ್ಫ್ ರಾಷ್ಟ್ರಕ್ಕೆ ಮರಳುವವರಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…