Featured

ಬಂಟ್ವಾಳ: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು – Vishwanews24

ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಬಂಟ್ವಾಳ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.

ಬಂಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಮೃತಪಟ್ಟವರು. ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಸದ್ಯ ದೇರಳಕಟ್ಟೆ ಫ್ಲಾಟ್ ನಲ್ಲಿ ನೆಲೆಸಿರುವ ಸಿದ್ದೀಖ್ ಶುಕ್ರವಾರದ ಜುಮಾ ನಮಾಝ್ ಅನ್ನು ಕರೋಪಾಡಿ ಮಸೀದಿಯಲ್ಲಿ ನಡೆಸಿದ್ದರು. ಅಲ್ಲಿಂದ ವಾಪಸ್ಸು ದೇರಳಕಟ್ಟೆಗೆ ಬರುವ ದಾರಿ ಮಧ್ಯೆ ಮುಡಿಪು ಜಂಕ್ಷನ್‌ನಲ್ಲಿ ಇಳಿದು, ಎಟಿಎಂ ಹಣ ಡ್ರಾ ಮಾಡಿದ್ದಾರೆ. ಅಲ್ಲಿಂದ ವಾಪಸ್ಸು ರಸ್ತೆ ದಾಟಿ ಬಸ್ಸನ್ನೇರಲು ಹೊರಟಾಗ ಮಂಗಳೂರು ಕಡೆಗೆ ಚಲಿಸುತ್ತಿದ್ದ ಸೂರಜ್ ನಾಥ್ ಎಂಬವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ತಲೆ ಭಾಗಕ್ಕೆ ಗಂಭೀರ ಗಾಯಗೊಂಡ ಸಿದ್ದೀಖ್ ಅವರನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.

ಸಿದ್ದೀಖ್ ಮುಂದಿನ ವಾರದಲ್ಲಿ ಮತ್ತೆ ಉದ್ಯೋಗ ಮಿತ್ತ ಗಲ್ಫ್ ರಾಷ್ಟ್ರಕ್ಕೆ ಮರಳುವವರಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago