ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊರ್ವ ಮೃತಪಟ್ಟು,ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಎ.28 ರಂದು ಬೆಳಿಗ್ಗೆ ನಡೆದಿದೆ.
ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು, ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಆಕಾಶ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿಸಿರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಅತೀವೇಗದ ಬಂದ ಕಾರು ಢಿಕ್ಕಿ ಹೊಡೆದಿದೆ.
ಅಪಘಾತದಿಂದ ಗಾಯಗೊಂಡಿದ್ದ ಸಂದೀಪ್ ಲೋಬೋ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದು,ಆಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುಂಜಾಲಕಟ್ಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…